ಬೆಂಗಳೂರು: ಮುಸ್ಲಿಂ ಸಮುದಾಯದವರ ಪವಿತ್ರ ಹಬ್ಬ ಬಕ್ರೀದ್ ಸಂಭ್ರಮದಿಂದ ನಡೆಯುತ್ತಿದೆ. ಸದ್ಯ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಇಂದು ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಭಾಗವಹಿಸಿ ಮುಸ್ಲಿಂ ಬಾಂಧವರಿಗೆ ಹಬ್ಬದ ಶುಭಾಶಯ ಕೋರಿದರು. ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರು ಈ ಸಂದರ್ಭದಲ್ಲಿ ಹಾಜರಿದ್ದರು.
ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯನವರು ಅವರು ಇಂದು ಚಾಮರಾಜಪೇಟೆಯ ಶ್ರೀ ಮಲೆ ಮಹದೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಾಜಿ ಸಚಿವರಾದ ಜಮೀರ್ ಅಹಮದ್ ಅವರು ಹಾಜರಿದ್ದರು.
ಇದೇ ವೇಳೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಎಲ್ಲಾ ಮುಸ್ಲಿಂ ಭಾಂದವರಿಗೆ ಬಕ್ರೀದ್ ಹಬ್ಬದ ಶುಭಾಶಯಗಳು. ಪ್ರೀತಿ, ವಿಶ್ವಾಸ, ತ್ಯಾಗ, ಸಾಧನೆ ಈ ಭಾವನೆಗಳು ಪ್ರತಿಯೊಬ್ಬರಲು ಬರಬೇಕೆ. ತ್ಯಾಗ ಬಲಿದಾನದ ಪ್ರತೀಕವಾಗಿ ಈದ್ಗಾ ಉಲ್ ಅಝ್ಹಾ ಆಚರಿಸುವ ಹಬ್ಬವಾಗಿದೆ ಅಲ್ಲನಾ ಬಳಿ ನಾನೂ ಪ್ರಾರ್ಥನೆ ಮಾಡುತ್ತೇನೆ ಎಂದು ಹೇಳಿದ್ದಾರೆ.
PublicNext
10/07/2022 02:20 pm