ಬೆಂಗಳೂರು: ಕುಟುಂಬ ರಾಜಕಾರಣಕ್ಕೆ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಭಾರೀ ಟೀಕೆಗೆ ಗುರಿಯಾಗಿದ್ದಾರೆ. ಹಾಗಿದ್ದರೂ ಅವರ ಕುಟುಂಬದಿಂದ ರಾಜಕೀಯಕ್ಕೆ ಬರುವವರ ಸಂಖ್ಯೆ ಕಡಿಮೆಯಾಗಿಲ್ಲ.
ಸದ್ಯ ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ಪಾಲಿಟಿಕ್ಸ್‌ಗೆ ಎಂಟ್ರಿ ಕೊಟ್ಟಿದೆ. ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಹಿರಿಯ ಪುತ್ರ ಡಾ.ಸೂರಜ್ ಅವರು ಹಾಸನದ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾಗುವ ಮೂಲಕ ರಾಜಕೀಯಕ್ಕೆ ಪ್ರವೇಶ ಮಾಡಿದ್ದಾರೆ.
ಡಾ.ಸೂರಜ್ ರೇವಣ್ಣ ಹೊಳೆನರಸೀಪುರ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಅವರ ವಿರುದ್ಧ ಯಾರೊಬ್ಬರೂ ನಾಮಪತ್ರ ಸಲ್ಲಿಸದಿದ್ದರಿಂದ ಸೂರಜ್ ರೇವಣ್ಣ ಹೆಚ್‍ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಪ್ರಜ್ವಲ್ ರೇವಣ್ಣ ಬಳಿಕ ಸೂರಜ್ ನೇರವಾಗಿ ರಾಜಕೀಯ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ.
PublicNext
20/09/2020 07:51 am