ದೆಹಲಿ:ರಾಜ್ಯಸಭೆಯ ನೂತನ ಸದಸ್ಯರಾದ ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಇಂದು ಪ್ರಮಾಣವಚನ ಸ್ವೀಕರಿಸುವರು ಸಂಸತ್ತಿನ ಮುಂಗಾರು ಅಧಿವೇಶನದ ಆರನೇ ದಿನದ ಕಲಾಪ ನಾಳೆ ಸಮಾವೇಶಗೊಳ್ಳಲಿದ್ದು, ರಾಜ್ಯಸಭೆಯಲ್ಲಿ ದೇವೇಗೌಡರು ಮೇಲ್ಮನೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸುವರು.
ಅಧಿವೇಶನದ ಅವಧಿ ಕಡಿಮೆ ಇರುವ ಕಾರಣ ಇಂದು ರಾಜ್ಯಸಭೆ ನಡೆಯಲಿದ್ದು, ಜೆಡಿಎಸ್ ಪರಮೋಚ್ಚ ನಾಯಕರು ಮೇಲ್ಮನೆ ನೂತನ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜ್ಯಸಭೆಯಲ್ಲಿ ತೆರವಾದ ನಾಲ್ಕು ಸ್ಥಾನಗಳಿಗಾಗಿ ಜೂನ್ 12ರಂದು ನಡೆದ ದ್ವೈವಾರ್ಷಿಕ ಚುನಾವಣೆಯಲ್ಲಿ 87 ವರ್ಷದ ದೇವೇಗೌಡರು ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ಬೆಂಬಲದೊಂದಿಗೆ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದರು.
ಸಂಸತ್ತಿನ ಮೇಲ್ಮನೆಗೆ ನೂತನವಾಗಿ ಆಯ್ಕೆಯಾದ 61 ಸದಸ್ಯರಲ್ಲಿ 45 ಮಂದಿ ಜುಲೈ 22ರಂದು ಸಂಸತ್ತಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು. ಅದರೆ ಅನಾರೋಗ್ಯ ಮತ್ತು ಹಿರಿಯ ನಾಗರಿಕರ ಪ್ರಮಾಣಕ್ಕೆ ಕೋವಿಡ್-19 ನಿರ್ಬಂಧಗಳು ಇದ್ದ ಕಾರಣ ಗೌಡರು ದೆಹಲಿಗೆ ತೆರಳಲು ಸಾಧ್ಯವಾಗಿರಲಿಲ್ಲ.
ವೈದ್ಯರ ಸಲಹೆ ಮೇರೆಗೆ ಮಾಜಿ ಪ್ರಧಾನಿ ಆಗ ಪ್ರಮಾಣವಚನ ಸಮಾರಂಭಕ್ಕೆ ಗೈರಾಗಿ, ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಪ್ರಮಾಣವಚನ ಸ್ವೀಕರಿಸಲು ನಿರ್ಧರಿಸಿದ್ದರು. ಗೌಡರು ಇಂದು ತಮ್ಮ ಪತ್ನಿ ಚೆನ್ನಮ್ಮ ಅವರೊಂದಿಗೆ ದೆಹಲಿ ತಲುಪಲಿದ್ದಾರೆ.
ದೇವೇಗೌಡರು 24 ವರ್ಷಗಳ ಬಳಿಕ ಎರಡನೇ ಬಾರಿ ರಾಜ್ಯಸಭೆ ಸದಸ್ಯರಾಗುತ್ತಿದ್ಧಾರೆ. 1996ರ ಜೂನ್‍ನಿಂದ 1997ರ ಏಪ್ರಿಲ್‍ವರೆಗೆ ಅವರು ಪ್ರಧಾನಮಂತ್ರಿಯಾಗಿದ್ದ ವೇಳೆ ಅವರು ಮೇಲ್ಮನೆಗೆ ಆಯ್ಕೆಯಾಗಿದ್ದರು.
PublicNext
20/09/2020 08:45 am