ಬೆಂಗಳೂರು: ನಾಲ್ಕನೇ ತರಗತಿವರೆಗೆ ಓದಿದ ನಾನೇನು ದಡ್ಡನೇ? ಕೊರೊನಾ ಹಿನ್ನೆಲೆ ಮಕ್ಕಳ ಜೀವ ತುಂಬಾ ಮುಖ್ಯ. ವಿದ್ಯೆಯನ್ನು ಯಾವಾಗ ಬೇಕಾದರೂ ಕಲಿಸಬಹುದು ಎಂದು ವಿಧಾನಸಭೆ ವಿಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 'ಮಕ್ಕಳ ಜೀವ ಮುಖ್ಯ. ವಿದ್ಯೆಯನ್ನು ಯಾವಾಗ ಬೇಕಾದರೂ ಕಲಿಸಬಹುದು. ಹೀಗಾಗಿ ನಾನು ಪತ್ರ ಬರೆದು ವಿದ್ಯಾಗಮ ನಿಲ್ಲಿಸುವ ಬಗ್ಗೆ ಹಾಗೂ ಶಾಲೆಯನ್ನು ಸದ್ಯ ಪ್ರಾರಂಭಿಸದಂತೆ ಪತ್ರ ಬರೆದಿದ್ದೆ. ಒಂದು ವರ್ಷ ಶಾಲೆಗೆ ಹೋಗದಿದ್ದರೆ ಏನೂ ಆಗಲ್ಲ. ಶಾಲೆಯನ್ನು ಪ್ರಾರಂಭಿಸುವ ಬಗ್ಗೆ ಆತುರ ಪಡಬಾರದು. ಒಂದು ವರ್ಷ ಶಾಲೆಗೆ ಕಳುಹಿಸದಿದ್ದರೆ ಏನೂ ಆಗಲ್ಲ, ಪಾಸ್ ಮಾಡಿ. ನಾನೂ ನಾಲ್ಕನೇ ತರಗತಿವರೆಗೆ ಓದಲಿಲ್ಲ. ಒಮ್ಮೆಲೆ ನೇರವಾಗಿ 5ನೇ ತರಗತಿಗೆ ಸೇರಿಕೊಂಡೆ. ನಾನೇನು ದಡ್ಡನೇ, ಆದರೂ ರಾಜ್ಯದ ಮಂತ್ರಿಯಾಗಿ 13 ಬಜೆಟ್ ಮಂಡಿಸಿದ್ದೇನೆ ಎಂದರು.
PublicNext
11/10/2020 06:36 pm