ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಲೇಜು ಆರಂಭವಾದ ತಕ್ಷಣವೇ ಉಪನ್ಯಾಸಕರ ನೇಮಕಾತಿ ಆದೇಶ: ಅಶ್ವತ್ಥನಾರಾಯಣ

ಬೆಂಗಳೂರು: ಕಾಲೇಜು ಆರಂಭವಾದ ತಕ್ಷಣವೇ ಉಪನ್ಯಾಸಕರ ನೇಮಕಾತಿ ಆದೇಶ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಉನ್ನತ ಶಿಕ್ಷಣ ಸಚಿವ, ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ನೇಮಕಾತಿ ಪತ್ರ ನೀಡುವಂತೆ ಒತ್ತಾಯಿಸಿ ಪಿಯುಸಿ ಮಂಡಳಿ ಎದುರು ನಾಲ್ಕು ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವವರನ್ನು ಅಶ್ವತ್ಥನಾರಾಯಣ ಇಂದು ಭೇಟಿಯಾದರು. ಈ ವೇಳೆ ಮಾತನಾಡಿದ ಅವರು, ‘ಆರ್ಥಿಕ ಇಲಾಖೆಯ ಕೆಲವು ಆಕ್ಷೇಪಗಳ ಕಾರಣಕ್ಕೆ ನೇಮಕಾತಿ ಆದೇಶ ನೀಡುವುದು ವಿಳಂಬವಾಗಿದೆ. ಇದಕ್ಕೆ ಕೋವಿಡ್ ಕೂಡ ಒಂದು ಪ್ರಮುಖ ಕಾರಣ. ಆರ್ಥಿಕ ಇಲಾಖೆ ಎತ್ತಿದ್ದ ಆಕ್ಷೇಪಗಳನ್ನು ಸಿಎಂ ಯಡಿಯೂರಪ್ಪ ಅವರೇ ನಿವಾರಿಸಿ, ಕಾಲೇಜುಗಳು ಆರಂಭವಾದ ಕೂಡಲೇ ನೇಮಕಾತಿ ಆದೇಶ ನೀಡುವಂತೆ ಸೂಚಿಸಿದ್ದಾರೆ’ ಎಂದು ಮಾಹಿತಿ ನೀಡಿದರು.

Edited By : Vijay Kumar
PublicNext

PublicNext

15/10/2020 03:53 pm

Cinque Terre

74.58 K

Cinque Terre

8

ಸಂಬಂಧಿತ ಸುದ್ದಿ