ಬೆಂಗಳೂರು : ಕೊರೊನಾದಿಂದ ಕಂಗಾಲಾದ ಸರ್ಕಾರ ಶಾಲಾ ಕಾಲೇಜುಗಳನ್ನು ಬಂದ್ ಮಾಡಿತ್ತು.
ಇದರಿಂದ ಆನ್ ಶಿಕ್ಷಣಕ್ಕೂ ಮೊರೆ ಹೋಗಿತ್ತು.
ಸದ್ಯ ಕೊರೊನಾ ಸಂಕಷ್ಟದ ನಡುವೆಯೂ ರಾಜ್ಯದಲ್ಲಿ ನವೆಂಬರ್ 17ರಿಂದ ಡಿಗ್ರಿ ಕಾಲೇಜು ತೆರೆಯಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಸಭೆಯಲ್ಲಿ ಕೊರೊನಾ ಸೋಂಕಿನ ಮುಂಜಾಗ್ರತಾ ಕ್ರಮಗಳೊಂದಿಗೆ ರಾಜ್ಯದಲ್ಲಿ ನವೆಂಬರ್ 17ರಿಂದ ಡಿಗ್ರಿ ಕಾಲೇಜ್ ಗಳನ್ನು ತೆರೆಯಲು ಒಪ್ಪಿಗೆ ಸೂಚಿಸಿದೆ.
ಈ ಕುರಿತಂತೆ ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿಎನ್.ಅಶ್ವತ್ಥ ನಾರಾಯಣ್ ಮಾಹಿತಿ ನೀಡಿದ್ದು, ರಾಜ್ಯಾಧ್ಯಂತ ನವೆಂಬರ್ 17ರಿಂದ ಡಿಗ್ರಿ ಕಾಲೇಜ್ ಆರಂಭಕ್ಕೆ ಇಂದಿನ ಸಿಎಂ ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಹೈಬ್ರಿಡ್ ಮಾದರಿಯಲ್ಲಿ ರಾಜ್ಯದಲ್ಲಿ ಡಿಗ್ರಿ ಕಾಲೇಜ್ ತೆರೆಯಲು ತೀರ್ಮಾನಿಸಲಾಗಿದೆ.
ತರಗತಿಗೆ ಹಾಜರಾಗಿಯಾದರೂ ಕಲಿಯಬಹುದು.
ಇಲ್ಲವೇ ಆನ್ ಲೈನ್ ತರಗತಿಯಲ್ಲಿ ಹಾಜರಾಗಿಯಾದರೂ ವಿದ್ಯಾರ್ಥಿಗಳು ಕಲಿಕೆ ಮುಂದುವರೆಸಬಹುದು ಎಂಬುದಾಗಿ ತಿಳಿಸಿದರು.
PublicNext
23/10/2020 01:04 pm