ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಆರಂಭಕ್ಕೆ ಆತುರ ಬೇಡ'

ಬೆಂಗಳೂರು: ಶಾಲಾ-ಕಾಲೇಜುಗಳ ಆರಂಭಕ್ಕೆ ಆತುರ ಬೇಡ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಆರಂಭಕ್ಕೆ ಆತುರದ ನಿರ್ಧಾರ ಕೈಗೊಂಡರೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ಸಮುದಾಯದ ಮಾರಣಹೋಮಕ್ಕೆ ನಾಂದಿ ಹಾಡಿದಂತಾಗುತ್ತದೆ. ಹುಷಾರ್...!! ಇಂತಹ ಯಾವುದೇ ನಿರ್ಧಾರ ತಕ್ಷಣ ಕೈಗೊಳ್ಳಬಾರದು' ಎಂದು ಹೇಳಿದ್ದಾರೆ.

ಶಾಲಾ-ಕಾಲೇಜುಗಳ ಆರಂಭಕ್ಕೆ ಶಿಕ್ಷಕ ಸಮುದಾಯ, ಶಾಲಾಭಿವೃದ್ಧಿ ಉಸ್ತುವಾರಿ ಸಮಿತಿ(ಎಸ್‍ಡಿಎಂಸಿ) ಹಾಗೂ ಪೋಷಕರ ಅಭಿಪ್ರಾಯವನ್ನು ರಾಜ್ಯ ಸರ್ಕಾರ ಸಂಗ್ರಹಿಸುತ್ತಿರುವುದೇನೋ ಸರಿ. ಆದರೆ, ಅತಿರೇಕದ ನಿರ್ಧಾರ ಅನಾಹುತಕ್ಕೆ ದಾರಿಯಾಗುತ್ತದೆ ಎಚ್ಚರ. ನೆರೆಯ ಆಂಧ್ರಪ್ರದೇಶದಲ್ಲಿ ಶಾಲೆ ಆರಂಭವಾದ ಮೂರೇ ದಿನದಲ್ಲಿ 260ಕ್ಕೂ ಹೆಚ್ಚು ಮಕ್ಕಳು ಹಾಗೂ 160ಕ್ಕೂ ಹೆಚ್ಚು ಶಿಕ್ಷಕರಿಗೆ ಕೊರೊನಾ ಸೋಂಕು ತಗುಲಿರುವ ವರದಿ ತೀವ್ರ ಆತಂಕಕಾರಿ ಬೆಳವಣಿಗೆ. ಇದು ರಾಜ್ಯದಲ್ಲಿ ಪೋಷಕರ ಜಂಘಾಬಲವನ್ನೇ ಉಡುಗಿಸಿದೆ ಎಂದು ತಿಳಿಸಿದ್ದಾರೆ.

ಸರ್ಕಾರ ಜನಾಭಿಪ್ರಾಯ ಸಂಗ್ರಹಿಸಲಿ. ಆದರೆ, ವಿದ್ಯಾರ್ಥಿಗಳು ಮತ್ತು ಶಿಕ್ಷಕ ಸಮುದಾಯದ ಪ್ರಾಣದೊಂದಿಗೆ ಚೆಲ್ಲಾಟವಾಡುವುದು ಯಾವುದೇ ಕಾರಣಕ್ಕೂ ನಾಗರಿಕ ಸಮಾಜ ಒಪ್ಪದು. ಈ ಹಿಂದೆಯೇ ಸರ್ಕಾರಕ್ಕೆ ಶಾಲಾ-ಕಾಲೇಜುಗಳನ್ನು ಆರಂಭಿಸುವುದು ಬೇಡ ಎಂದು ಸಲಹೆ ನೀಡಿದ್ದೆ ಎಂದಿದ್ದಾರೆ.

ಮದ್ದಿಲ್ಲದ ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ ಇಂತಹ ಕಾಲಘಟ್ಟದಲ್ಲಿ ಶಾಲಾ-ಕಾಲೇಜುಗಳನ್ನು ಆರಂಭಿಸುವ ನಿರ್ಧಾರದಿಂದ ಹಿಂದೆ ಸರಿಯಲೇಬೇಕು. ಇಲ್ಲದಿದ್ದರೆ ಸರ್ಕಾರವೇ ಮುಂದಿನ ಎಲ್ಲಾ ಅನಾಹುತಗಳ ಹೊಣೆ ಹೊರಬೇಕಾಗುತ್ತದೆ. ಶಾಲಾ-ಕಾಲೇಜು ಆರಂಭಿಸುವ ವಿಚಾರದಲ್ಲಿ ಮಾತ್ರ ಸರ್ಕಾರ ಮೈಯೆಲ್ಲ ಕಣ್ಣಾಗಿರಬೇಕು. ಈಗ ಶಾಲಾ-ಕಾಲೇಜು ಆರಂಭಿಸುವ ಉಮೇದಿಯಿಂದ ಸರ್ಕಾರ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದ್ದಾರೆ.

Edited By : Vijay Kumar
PublicNext

PublicNext

06/11/2020 07:38 pm

Cinque Terre

92.87 K

Cinque Terre

6

ಸಂಬಂಧಿತ ಸುದ್ದಿ