ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗುಡ್‌ನ್ಯೂಸ್‌: ನ.20ರಿಂದ ಪಿಯು ಉಪನ್ಯಾಸಕರ ನೇಮಕಾತಿ ಆದೇಶ ಶುರು

ಬೆಂಗಳೂರು: ಹೆಮ್ಮಾರಿ ಕೊರೊನಾ ತಂದಿದ್ದ ಸಂಕಷ್ಟದಿಂದ ಮುಚ್ಚಿದ್ದ ಕಾಲೇಜುಗಳು ಇಂದಿನದಿಂದ ಪುನಾರಂಭಗೊಂಡಿವೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿಗೊಂಡಿರುವ ನೂತನ ಪದವಿ ಪೂರ್ವ ಕಾಲೇಜು ಉಪನ್ಯಾಸಕರಿಗೆ ಗುಡ್‌ನ್ಯೂಸ್‌ ನೀಡಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, 'ಈಗಾಗಲೇ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿಗೊಂಡಿರುವ ನೂತನ ಪಿಯು ಉಪನ್ಯಾಸಕ ಅಭ್ಯರ್ಥಿಗಳಿಗೆ ನ.20ರಿಂದ ನೇಮಕಾತಿ ಆದೇಶಗಳನ್ನು ನೀಡಲಾಗುವುದು. ಮಂಗಳವಾರ ಬೆಳಿಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದ್ದು, ನ.20ರಂದು ಸಿಎಂ ಯಡಿಯೂರಪ್ಪ ಸಾಂಕೇತಿಕವಾಗಿ ನೇಮಕಾತಿ ಆದೇಶ ನೀಡಲಿದ್ದಾರೆ' ಎಂದು ತಿಳಿಸಿದ್ದಾರೆ.

Edited By : Vijay Kumar
PublicNext

PublicNext

17/11/2020 06:51 pm

Cinque Terre

108.42 K

Cinque Terre

1

ಸಂಬಂಧಿತ ಸುದ್ದಿ