ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇಂದಿನಿಂದ ಎರಡನೇ ಹಂತದಲ್ಲಿ ಶಾಲೆಗಳು ಆರಂಭ

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಎರಡನೇ ಹಂತದಲ್ಲಿ ಶಾಲೆಗಳು ಆರಂಭವಾಗಲಿವೆ. ಆರನೇ ತರಗತಿಯಿಂದ ಎಂಟನೇ ತರಗತಿವರೆಗೆ ಶಾಲೆಗಳು ಇಂದಿನಿಂದ ಆರಂಭವಾಗಲಿವೆ.

ಈ ಹಿನ್ನೆಲೆಯಲ್ಲಿ ಕೋವಿಡ್ ನಿಯಮಗಳ ಪಾಲನೆ ಮೇಲೆ ಕಟ್ಟುನಿಟ್ಟಿನ ನಿಗಾ ಇಡಲು ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ. ಶಾಲೆ ಓಪನ್ ಸಿದ್ಧತೆಗಳ ಬಗ್ಗೆ ಇಂದು ನಡೆದ ಸಭೆಯಲ್ಲಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ಪಡೆದುಕೊಂಡರು. ಈ ವೇಳೆ, ಈಗಾಗಲೇ ನಡೆಯುತ್ತಿರುವ ತರಗತಿಗಳಿಂದ ಯಾವುದೇ ತೆರನಾದ ಸಮಸ್ಯೆ ಉಂಟಾಗಿಲ್ಲ ಎಂಬ ವಿಚಾರವನ್ನು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸಿಎಂ ಗಮನಕ್ಕೆ ತಂದಿದ್ದಾರೆ.

Edited By : Nagaraj Tulugeri
PublicNext

PublicNext

06/09/2021 08:45 am

Cinque Terre

459.83 K

Cinque Terre

1