ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲಿ ನೂತನ ಶಿಕ್ಷಣ ನೀತಿ ಜಾರಿಯಾಗಲು ನಾವು ಬಿಡಲ್ಲ: ಡಿ.ಕೆ ಶಿವಕುಮಾರ್

ಬೆಂಗಳೂರು: ಕೇಂದ್ರ ಸರ್ಕಾರದ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಬಗ್ಗೆ ನಾವು ಸದನದಲ್ಲಿ ಚರ್ಚೆಗೆ ಅವಕಾಶ ಕೇಳಿದ್ದೇವೆ. ಇದಕ್ಕೆ ಆಡಳಿತ ಪಕ್ಷದವರು ಅವಕಾಶ ಮಾಡಿಕೊಟ್ಟಿಲ್ಲ. ಇದು ನಮ್ಮ ಶೈಕ್ಷಣಿಕ ವಿಚಾರಕ್ಕೆ ಸಂಬಂಧಿಸಿದ್ದು. ಈ ಬಗ್ಗೆ ಚರ್ಚೆಗೆ ಅವಕಾಶ ಒದಗಿಸದೇ ಇರುವುದು ಅಪ್ರಜಾತಾಂತ್ರಿಕ. ಒಂದು ವೇಳೆ ರಾಜ್ಯದಲ್ಲಿ ನೂತನ ಶಿಕ್ಷಣ ನೀತಿ ಜಾರಿಯಾದರೆ ನಮ್ಮ ಸರ್ಕಾರ ಬಂದಾಗ ಅದನ್ನು ಅದನ್ನು ನಾವು ಹಿಂಪಡೆಯುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಶುಕ್ರವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್, ರಾಜ್ಯ ಸರ್ಕಾರ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನಕ್ಕೆ ತರುತ್ತಿದೆ. ಬಿಜೆಪಿ ಆಡಳಿತದಲ್ಲಿರುವ ಯಾವ ರಾಜ್ಯದಲ್ಲೂ ಇದು ಅನುಷ್ಠಾನಗೊಳ್ಳುತ್ತಿಲ್ಲ. ನಮ್ಮ ರಾಜ್ಯದ ಪ್ರಾಥಮಿಕ ಶಿಕ್ಷಣ ಸಚಿವರು ಈ ನೀತಿಯ ಅನುಷ್ಠಾನ ಕ್ಲಿಷ್ಟವಾಗಿದ್ದು, ಅದರ ಅಧ್ಯಯನ ನಡೆಯಬೇಕು ಎಂದು ಹೇಳಿದ್ದಾರೆ. ಸದನದಲ್ಲಿ ಈ ಬಗ್ಗೆ ಚರ್ಚೆ ಮಾಡೋಣ, ಇದರಲ್ಲಿ ಏನೆಲ್ಲಾ ಪ್ರಯೋಜನವಾಗಲಿದೆ ಎಂಬುದನ್ನು ಸ್ಪಷ್ಟಪಡಿಸಿ ಎಂದೆವು. ಅದನ್ನು ಬಿಟ್ಟು ಜಾರಿಗೆ ಮುಂದಾಗಿದ್ದಾರೆ. ಇವರು ಆರ್‌ಎಸ್ಎಸ್ ಅಜೆಂಡಾ, ನಾಗ್ಪುರ ಅಜೆಂಡಾಗಳನ್ನು ತಮ್ಮ ಮನೆಗಳಲ್ಲಿ ಇಟ್ಟುಕೊಳ್ಳಲಿ. ಬೇಕಾದರೆ ತಮ್ಮದೇ ಸ್ವಂತ ಸಂಸ್ಥೆಗಳನ್ನು ಮಾಡಿಕೊಂಡು ಬೋಧನೆ ಮಾಡಿಕೊಳ್ಳಲಿ. ಇದು ನಮ್ಮ ಮಕ್ಕಳ ಶಿಕ್ಷಣದ ಪ್ರಶ್ನೆ ಎಂದರು.

Edited By : Nagaraj Tulugeri
PublicNext

PublicNext

25/09/2021 08:09 am

Cinque Terre

69.72 K

Cinque Terre

13

ಸಂಬಂಧಿತ ಸುದ್ದಿ