ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅತಿಥಿ ಉಪನ್ಯಾಸಕರ ಸೇವೆ ಮುಂದುವರೆಸಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು: ಅತಿಥಿ ಉಪನ್ಯಾಸಕರ ಸೇವೆ ಮುಂದುವರಿಸುವುದಕ್ಕೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ಕಳೆದ ಸಾಲಿನಲ್ಲಿ ಬೇರೆ ಬೇರೆ ವಿಶ್ವ ವಿದ್ಯಾಲಯಗಳಲ್ಲಿ ಕಾರ್ಯ ನಿರ್ವಹಿಸಿದ ಅತಿಥಿ ಉಪನ್ಯಾಸಕರ ಸೇವೆ ಮುಂದುವರಿಸುವುದಕ್ಕೆ ನಿರ್ಧಾರ ಮಾಡಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ 2021- 22ನೇ ಸಾಲಿಗೂ‌ ಸೇವೆ ಮುಂದುವರಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಕಳೆದ ಸಾಲಿನಲ್ಲಿ ಅತಿಥಿ ಉಪನ್ಯಾಸಕರಾಗಿ ಇದ್ದವರನ್ನು ಒಂದು ದಿನದ ಮಟ್ಟಿಗೆ ಸೇವೆಯಿಂದ ಬಿಡುಗಡೆಗೊಳಿಸಿ ಪುನಃ ಸೇವೆಗೆ ಸೇರಿಸಿಕೊಳ್ಳಲು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಕೊವಿಡ್ ಹಿನ್ನೆಲೆಯಲ್ಲಿ ಸಾರ್ವಜನಿಕ ಹಾಗೂ ಶೈಕ್ಷಣಿಕ ಹಿತದೃಷ್ಟಿಯಿಂದ ರಾಜ್ಯ ಸರ್ಕಾರದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ.

ಕಳೆದ ಸಾಲಿನಲ್ಲಿ ಅತಿಥಿ ಉಪನ್ಯಾಸಕರಾಗಿದ್ದವರನ್ನು ಒಂದು ದಿನದ ಮಟ್ಟಿಗೆ ಸೇವೆಯಿಂದ ಬಿಡುಗಡೆಗೊಳಿಸಿ ಪುನಃ ಸೇವೆಗೆ ಸೇರಿಸಿಕೊಳ್ಳಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ. ಕೋವಿಡ್ ವಿಷಮ ಪರಿಸ್ಥಿತಿಯನ್ನು ಪರಿಗಣನೆಗೆ ತೆಗೆದುಕೊಂಡು ಸಾರ್ವಜನಿಕ ಹಾಗೂ ಶೈಕ್ಷಣಿಕ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅಶ್ವತ್ಥ ನಾರಾಯಣ ವಿವರಿಸಿದ್ದಾರೆ.

Edited By : Nagaraj Tulugeri
PublicNext

PublicNext

08/10/2021 10:11 pm

Cinque Terre

128.92 K

Cinque Terre

0

ಸಂಬಂಧಿತ ಸುದ್ದಿ