ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಾಲಾ ಮಕ್ಕಳ ಬಿಸಿಯೂಟಕ್ಕೆ ಸಿರಿಧಾನ್ಯ ವಿತರಣೆ: ಸಚಿವ ಬಿ.ಸಿ ಪಾಟೀಲ್

ಹೊಸದುರ್ಗ: ಶಾಲಾ ಮಕ್ಕಳ ಬಿಸಿಯೂಟದಲ್ಲಿ ಇನ್ಮುಂದೆ ಸಿರಿಧಾನ್ಯ ನೀಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದ್ದಾರೆ.

ಹೊಸದುರ್ಗ ತಾಲೂಕಿನ ಸಾಣೇಹಳ್ಳಿ ತರಳಬಾಳು ಶಾಖಾ ಮಠದಲ್ಲಿ ಶಿವಸಂಚಾರ ನಾಟಕೋತ್ಸವ ಬೆಳ್ಳಿಹಬ್ಬ ಸಮಾರಂಭದಲ್ಲಿ ಮಾತನಾಡಿದ ಅವರು, 2023 ಕ್ಕೆ ಅಂತರರಾಷ್ಟ್ರೀಯ ಮಟ್ಟದ ಸಿರಿಧಾನ್ಯ ಮೇಳ ಏರ್ಪಡಿಸಲು ಯೋಜಿಸಲಾಗುತ್ತಿದೆ. ಮಧ್ಯಾಹ್ನದ ಬಿಸಿಯೂಟಕ್ಕೆ ಶಾಲಾ ಮಕ್ಕಳಿಗೆ ಸಿರಿಧಾನ್ಯ ಕೊಡಲಾಗುವುದು ಎಂದು ಹೇಳಿದ್ದಾರೆ.

ಸಾವಯುವ ಕೃಷಿ ತುಂಬಾ ಅವಶ್ಯಕವಾಗಿದ್ದು, ಬೆಳೆಗಳಿಗೆ ವೈಜ್ಞಾನಿಕ ಬೆಲೆ ಬರಬೇಕು. ಇದಕ್ಕಾಗಿ ಸರ್ಕಾರ ಉತ್ಪಾದಕ ಸಂಸ್ಥೆ ಸ್ಥಾಪಿಸುವ ಮೂಲಕ ಕೃಷಿಕರಿಗೆ ಬೆಂಬಲ ನೀಡುತ್ತಿದೆ. ಈ ಯೋಜನೆಗೆ ಪ್ರಧಾನಿ ಮೋದಿಯವರು ಆತ್ಮ ನಿರ್ಭರ ಯೋಜನೆಯಡಿ 10 ಕೋಟಿ ರೂ. ಮೀಸಲಿಟ್ಟಿದ್ದಾರೆ ಎಂದು ತಿಳಿಸಿದರು.

Edited By : Nagaraj Tulugeri
PublicNext

PublicNext

09/11/2021 10:00 am

Cinque Terre

23.95 K

Cinque Terre

0

ಸಂಬಂಧಿತ ಸುದ್ದಿ