ಬೆಂಗಳೂರು: ಸರಕಾರ ಘೋಷಿಸಿರುವ ಪ್ಯಾಕೇಜ್ ಸಮಾಧಾನಕರವಾಗಿಲ್ಲ ಎಂದು ರಾಜ್ಯದ ಅತಿಥಿ ಉಪನ್ಯಾಸಕರ ಕೆಲವು ಸಂಘಟನೆಗಳು, ತಾವು ಮುಷ್ಕರ ಮುಂದುವರೆಸಿದ್ದಾಗಿ ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ, ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಸರಕಾರವು ಸಹಾನುಭೂತಿಯಿಂದ ಪರಿಶೀಲಿಸಿದೆ., ಅವರ ವೇತನವನ್ನು ಎರಡು ಪಟ್ಟಿಗಿಂತಲೂ ಹೆಚ್ಚು ಏರಿಸಿದೆ. ಆದ್ದರಿಂದ, ಮುಷ್ಕರವನ್ನು ಮುಂದುವರಿಸದೆ ಬೋಧನೆಗೆ ಹಿಂದಿರುಗಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
2022-23ರ ಶೈಕ್ಷಣಿಕ ವರ್ಷಕ್ಕೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳುವ ಪ್ರಕ್ರಿಯೆ ಸೋಮವಾರದಿಂದ (ಜ.17) ಆರಂಭವಾಗಲಿದೆ. ಇದಕ್ಕಾಗಿ ಅಭಿವೃದ್ಧಿಪಡಿಸಿರುವ ಆನ್-ಲೈನ್ ಪೋರ್ಟಲ್ ನಲ್ಲಿ ಅತಿಥಿ ಉಪನ್ಯಾಸಕರು ಅರ್ಜಿ ಹಾಕಿಕೊಳ್ಳಬೇಕು. ಅರ್ಜಿ ಸಲ್ಲಿಸಲು ಒಂದು ವಾರ ಕಾಲಾವಕಾಶವಿದ್ದು, ಅಭ್ಯರ್ಥಿಗಳು ತಮ್ಮ ಇಷ್ಟದ ಐದು ಸರಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದು ಅವರು ಹೇಳಿದ್ದಾರೆ.
PublicNext
15/01/2022 09:14 pm