ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಾಳೆಯಿಂದ ಪದವಿ, ಇಂಜಿನಿಯರಿಂಗ್ ಕಾಲೇಜುಗಳು ಆರಂಭ: ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ವಿವಾದ ಭುಗಿಲೆದ್ದ ಹಿನ್ನೆಲೆಯಲ್ಲಿ ರಜೆ ನೀಡಲಾಗಿದ್ದ ಪದವಿ, ಎಂಜಿನಿಯರಿಂಗ್, ಡಿಪ್ಲೊಮಾ ಮತ್ತು ಸ್ನಾತಕೋತ್ತರ ತರಗತಿಗಳನ್ನು ಬುಧವಾರದಿಂದಲೇ ಪುನಾರಂಭವಾಗಲಿವೆ. ಸೋಮವಾರ ಸಿಎಂ ನೇತೃತ್ವದ ಸಭೆ ನಂತರ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ಈ ಮಾಹಿತಿ ತಿಳಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸೋಮವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಹೀಗಾಗಿ, ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಬರುವ ಎಲ್ಲ ಬಗೆಯ ಶಿಕ್ಷಣ ಸಂಸ್ಥೆಗಳಲ್ಲೂ ಭೌತಿಕ ತರಗತಿಗಳು ಮತ್ತೆ ಆರಂಭವಾಗಲಿವೆ. ರಜೆ ಹಿನ್ನೆಲೆಯಲ್ಲಿ ಈ ಸಂಸ್ಥೆಗಳಲ್ಲಿ ಆನ್ ಲೈನ್ ತರಗತಿಗಳನ್ನು ನಡೆಸಲಾಗುತ್ತಿದ್ದುದನ್ನು ಇಲ್ಲಿ ಸ್ಮರಿಸಬಹುದು.

Edited By : Nagaraj Tulugeri
PublicNext

PublicNext

15/02/2022 07:25 am

Cinque Terre

79.7 K

Cinque Terre

0

ಸಂಬಂಧಿತ ಸುದ್ದಿ