ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವೀನ್ ತಂದೆಗೆ ಕರೆ ಮಾಡಿ ಸಾಂತ್ವನ ಹೇಳಿದ ಪ್ರಧಾನಿ ಮೋದಿ

ನವದೆಹಲಿ: ಉಕ್ರೇನ್‌ನ ಕಾರ್ಕೀವ್ ನಗರದ ಬಳಿ ಮಂಗಳವಾರ ಬೆಳಿಗ್ಗೆ ನಡೆದ ರಷ್ಯಾ ಪಡೆಗಳ ಕ್ಷಿಪಣಿ ದಾಳಿಯಲ್ಲಿ ರಾಣೆಬೆನ್ನೂರು ತಾಲ್ಲೂಕಿನ ಚಳಗೇರಿ ಗ್ರಾಮದ ಎಂಬಿಬಿಎಸ್ ವಿದ್ಯಾರ್ಥಿ ನವೀನ ಗ್ಯಾನಗೌಡರ್ (22) ಮೃತಪಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿ ನವೀನ್ ಅವರ ತಂದೆ ಶೇಖಪ್ಪ ಗ್ಯಾನಗೌಡರ್ ಜೊತೆ ದೂರವಾಣಿ ಮೂಲಕ ಮಾತನಾಡಿ ಸಾಂತ್ವನ ಹೇಳಿದ್ದಾರೆ.

ಮಗನನ್ನು ಕಳೆದುಕೊಂಡಿರುವ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಇದ್ದೊಬ್ಬ ಮಗನನ್ನು ಕಳೆದುಕೊಂಡು ಪುತ್ರ ಶೋಕದಿಂದ ಪೋಷಕರು ಮರುಗುತ್ತಿದ್ದಾರೆ.

ಪುತ್ರನನ್ನು ಕಳೆದುಕೊಂಡ ನೋವಿನಲ್ಲಿ ತಂದೆ ಶೇಖರ ಗೌಡ ಪ್ರಧಾನಿ ಮೋದಿ ಮಾತುಗಳನ್ನು ಆಲಿಸಿ ಕಣ್ಣೀರು ಹಾಕುತ್ತಲೆ, 'ನನ್ನ ಮಗನ ಪಾರ್ಥಿವ ಶರೀರವನ್ನು ಆದಷ್ಟು ಬೇಗನೆ ಕರ್ನಾಟಕಕ್ಕೆ ತರಲು ಸಹಾಯ ಮಾಡಿ' ಎಂದು ಮನವಿ ಮಾಡಿಕೊಂಡಿದ್ದಾರೆ.

Edited By : Vijay Kumar
PublicNext

PublicNext

01/03/2022 08:47 pm

Cinque Terre

67.03 K

Cinque Terre

4