ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ನೀಟ್ ಪರೀಕ್ಷೆ ವಿದ್ಯಾರ್ಥಿಗಳ ಪಾಲಿಗೆ ಮರಣ ಶಾಸನ': ಕುಮಾರಸ್ವಾಮಿ

ಬೆಂಗಳೂರು: ನೀಟ್ ಪರೀಕ್ಷೆಯು ವಿದ್ಯಾರ್ಥಿಗಳು ಹಾಗೂ ಪೋಷಕರ ಪಾಲಿಗೆ ಮರಣ ಶಾಸನ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ನೀಟ್ ವ್ಯವಸ್ಥೆಯ ವಿರುದ್ಧ ಕಿಡಿ ಕಾರಿದ್ದಾರೆ. " ವೈದ್ಯಶಿಕ್ಷಣದ ಕನಸು ಕಾಣುವ ಬಡ, ಮಧ್ಯಮ ವರ್ಗದ ಬದುಕನ್ನು ಛಿದ್ರಗೊಳಿಸುತ್ತಿರುವ ನೀಟ್ (ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ- NEET), ವಿದ್ಯಾರ್ಥಿಗಳು & ಪೋಷಕರ ಪಾಲಿಗೆ ಮರಣಶಾಸನವಾಗಿದೆ. ಉನ್ನತ ಶಿಕ್ಷಣವನ್ನು ಉಳ್ಳವರಿಗೆ ಮೀಸಲಿಟ್ಟು ಉಳಿದವರಿಗೆ ವ್ಯವಸ್ಥಿತವಾಗಿ ನಿರಾಕರಿಸಲಾಗುತ್ತಿದೆ ಎಂದು ಕುಮಾರಸ್ವಾಮಿ ಅಸಮಾಧಾನ ಹೊರ ಹಾಕಿದ್ದಾರೆ. ನವೀನ್ ಸಾವಿಗೆ ನೀಟ್ ವ್ಯೂಹ ಕಾರಣ ಎಂದಿರುವ ಅವರು ಆತನ ಸಾವು 'ನೀಟ್ ಸಾಚಾತನ'ವನ್ನು ಬಯಲು ಮಾಡಿದೆ ಎಂದಿದ್ದಾರೆ.

ಇನ್ನೊಂದು ಟ್ವೀಟ್‌ನಲ್ಲಿ ʼಟ್ಯೂಷನ್ ಅಂಗಡಿʼಗಳ ಹಿಂದೆ ಯಾರಿದ್ದಾರೆ? ಯಾರಿಗೂ ಕಾಣದಂತೆ ಕೇಂದ್ರ ಸರಕಾರವೇ ಅವಿತು ಕೂತಿದೆಯಾ? ನೀಟ್‌ ಸೃಷ್ಟಿಸಿದ ʼಶೈಕ್ಷಣಿಕ ಅರಾಜಕತೆʼಗೆ ಇನ್ನೆಷ್ಟು ವಿದ್ಯಾರ್ಥಿಗಳು ಬಲಿಯಾಗಬೇಕು?' ಎಂದು ಪ್ರಶ್ನಿಸಿದ್ದಾರೆ.

Edited By : Nagaraj Tulugeri
PublicNext

PublicNext

03/03/2022 09:15 am

Cinque Terre

31.53 K

Cinque Terre

7