ಬೆಂಗಳೂರು: ರಾಜ್ಯದ ಶಾಲಾ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಲು ಸಮಿತಿ ರಚಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ವಿಧಾನಪರಿಷತ್ ನಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಈ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಚರ್ಚಿಸುವ ಜೊತೆಗೆ ಸಮಿತಿ ರಚಿಸಿ ವರದಿ ಪಡೆಯಲಾಗುವುದು ಎಂದು ಹೇಳಿದ್ದಾರೆ. ಮೊದಲು ಪಠ್ಯದಲ್ಲಿ ಒಂದು ಅವಧಿಯಲ್ಲಿ ನೈತಿಕ ಶಿಕ್ಷಣ ಕಲಿಸಲಾಗುತ್ತಿತ್ತು. ಇತ್ತೀಚೆಗೆ ಅಂತಹ ಪೀರಿಯಡ್‌ಗಳು ಇಲ್ಲ. ಹಾಗಾಗಿ ಭಗವದ್ಗೀತೆ ಸೇರ್ಪಡೆ ಮಾಡುವ ಸಮಿತಿ ರಚಿಸಲಾಗುವುದು ಎಂದರು.
PublicNext
22/03/2022 07:26 am