ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮಾದರಿಯಲ್ಲೇ ಪಿಯುಸಿ ಪರೀಕ್ಷೆ ಬರೆಯಲಿರುವ ಎಲ್ಲದ ವಿದ್ಯಾರ್ಥಿಗಳು ವಸ್ತ್ರಸಂಹಿತೆ ನಿಯಮ ಪಾಲಿಸಬೇಕು. ವಿದ್ಯಾರ್ಥಿನಿಯರು ಪರೀಕ್ಷಾ ಕೊಠಡಿಗೆ ಹಿಜಾಬ್ ಧರಿಸಿ ಬರುವಂತಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿಕ್ಷಣ ಇಲಾಖೆ ಹೊರಡಿಸುವ ಆದೇಶವನ್ನು ವಿದ್ಯಾರ್ಥಿಗಳು ಹಾಗೂ ಪೋಷಕರು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚನೆ ನೀಡಿದ್ದಾರೆ. ಪರೀಕ್ಷೆ ವೇಳೆ ಹಿಜಾಬ್ ನಿಷೇಧ ಸಂಬಂಧ ಕೆಲವೇ ದಿನಗಳಲ್ಲಿ ಶಿಕ್ಷಣ ಇಲಾಖೆ ಕೂಡಾ ಅಧಿಕೃತ ಆದೇಶ ಹೊರಡಿಸಲಿದೆ. ಈ ಆದೇಶದ ಅನ್ವಯ ಹಿಜಾಬ್ ಮಾತ್ರವಲ್ಲ, ಯಾವುದೇ ಧರ್ಮ ಸೂಚಕ ವಸ್ತ್ರಗಳನ್ನು ಕಾಲೇಜ್‌ಗೆ ಪರೀಕ್ಷೆ ವೇಳೆ ಧರಿಸಿ ಬರುವಂತಿಲ್ಲ ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ.
PublicNext
07/04/2022 01:57 pm