ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸುಗಮವಾಗಿ ನಡೆದು ಮುಕ್ತಾಯವಾಗಿದೆ: ಸಚಿವ ನಾಗೇಶ್

ವಿಜಯಪುರ: ರಾಜ್ಯದಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸುಗಮವಾಗಿ ನಡೆದು, ಮುಕ್ತಾಯಗೊಂಡಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಹಾಗೂ ಬಿ.ಸಿ ನಾಗೇಶ್ ಹೇಳಿದ್ದಾರೆ.

ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳ ಶೈಕ್ಷಣಿಕ ಪ್ರಗತಿ ಪರಿಶೀಲನೆಗಾಗಿ ವಿಜಯಪುರಕ್ಕೆ ಆಗಮಿಸಿರುವ ಸಚಿವರು, ಆಲಮಟ್ಟಿಯಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮಾ. 28ರಿಂದ ಆರಂಭವಾದ ಪರೀಕ್ಷೆ ರಾಜ್ಯದಾದ್ಯಂತ ಸುಸೂತ್ರವಾಗಿ ನಡೆದು, ಮುಕ್ತಾಯವಾಗಿದೆ. ಒಂದು ಪರೀಕ್ಷಾ ಕೇಂದ್ರದಲ್ಲಿ ಮಾತ್ರ ಪರೀಕ್ಷಾ ಅಕ್ರಮ ವರದಿಯಾಗಿದೆ. ಈ ಸಂಬಂಧ ಒಬ್ಬ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ’ ಎಂದು ಸಚಿವರು ತಿಳಿಸಿದ್ದಾರೆ.

‘ಮೊದಲ ಬಾರಿ ಪರೀಕ್ಷೆ ಬರೆಯುತ್ತಿರುವವರಲ್ಲಿ ಹಾಜರಾತಿ ಪ್ರಮಾಣ ಶೇ.98ಕ್ಕಿಂತ ಹೆಚ್ಚು ಇದೆ. ಆದರೆ, ಖಾಸಗಿ ಅಭ್ಯರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳ ಸಂಖ್ಯೆಯಲ್ಲಿ ಗೈರು ಹಾಜರಾತಿ ಪ್ರಮಾಣ ಎಂದಿನಂತೆ ಮುಂದುವರೆದಿದೆ’ ಎಂದು ಸಚಿವರು ಮಾಹಿತಿ ನೀಡಿದರು.

‘ನಾಳೆಯಿಂದ ಕೀ ಉತ್ತರಗಳು, ಉತ್ತರಗಳಿಗೆ ಆಕ್ಷೇಪಣೆ ಕರೆಯುವುದು ಸೇರಿದಂತೆ ಇನ್ನಿತರ ಪ್ರಕ್ರಿಯೆಗಳು ಆರಂಭವಾಗುತ್ತವೆ. ಏಪ್ರಿಲ್ ಕೊನೆಯ ವಾರದಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗುತ್ತದೆ. ಮೇ ಎರಡನೇ ವಾರದಲ್ಲಿ ಫಲಿತಾಂಶಪ್ರಕಟಿಸುವ ಗುರಿ ಹೊಂದಲಾಗಿದೆ. ಜೂನ್ 4ನೇ ವಾರದಲ್ಲಿ ಪೂರಕ ಪರೀಕ್ಷೆ ನಡೆಯಲಿದೆ’ ಎಂದು ಸಚಿವರು ಮಾಹಿತಿ ನೀಡಿದರು.

Edited By : Nagaraj Tulugeri
PublicNext

PublicNext

11/04/2022 08:54 pm

Cinque Terre

101.13 K

Cinque Terre

0

ಸಂಬಂಧಿತ ಸುದ್ದಿ