ಬೆಂಗಳೂರು: ಟಿಪ್ಪು ಸುಲ್ತಾನ್ ಎಂಬ ಬಿರುದು ಹಾಗೂ ಟಿಪ್ಪು ಕುರಿತಾದ ವಿಷಯವನ್ನು ಪಠ್ಯಪುಸ್ತಕದಿಂದ ಕೈ ಬಿಡೋದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿರುವ ಅವರು, ಶಾಸಕ ಅಪ್ಪಚ್ಚು ರಂಜನ್ ಅವರು ಈ ಬಗ್ಗೆ ಪೂರಕ ಮಾಹಿತಿ ನೀಡಿದ್ದಾರೆ. ಉಳಿಸಿದರೆ ಎಲ್ಲ ಮಾಹಿತಿ ಉಳಿಸಬೇಕು. ಇಲ್ಲದಿದ್ದಲ್ಲಿ ಪೂರ್ತಿ ವಿಷಯವನ್ನೇ ತೆಗೆದು ಹಾಕಬೇಕು. ಟಿಪ್ಪು ತನ್ನ ಆಡಳಿತದಲ್ಲಿ ಕನ್ನಡ ತೆಗೆದು ಹಾಕಿ ಪರ್ಷಿಯನ್ ಭಾಷೆಯನ್ನು ಪ್ರಜೆಗಳ ಮೇಲೆ ಹೇರಿದ್ದು ಹಾಗೂ ಕೊಡವರ ಮೇಲೆ ದೌರ್ಜನ್ಯ ಮಾಡಿದ್ದರ ಬಗ್ಗೆ ದಾಖಲೆ ನೀಡಿದ್ದಾರೆ ಎಂದು ನಾಗೇಶ್ ಹೇಳಿದ್ದಾರೆ.
PublicNext
20/04/2022 09:53 am