ಮೈಸೂರು: ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿಗಾಗಿ ನಡೆಯುವ ಪರೀಕ್ಷೆಗಳು ಪಾವಿತ್ರ್ಯತೆ ಕಳೆದುಕೊಂಡಿವೆ. ಸರ್ಕಾರ ಈ ಪರೀಕ್ಷೆಗಳಲ್ಲಿ ಪಾರದರ್ಶಕತೆ ಕಾಪಾಡುವಲ್ಲಿ ವಿಫಲವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವನಾಥ್ ಅವರು, ಈಗ ಎಲ್ಲವೂ ಹಣದ ಮೇಲೆ ಅವಲಂಬಿತವಾಗಿದೆ. “ಹಣವು ಎಲ್ಲವನ್ನೂ ಆಳುತ್ತಿದೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ಅವರ ಸ್ನೇಹಿತ ಕೆಪಿಎಸ್‌ಸಿ ಸದಸ್ಯರಾಗಿದ್ದಾರೆ. ಅಂತಹವರು ಶಾಮೀಲಾದರೆ, ಕೆಪಿಎಸ್‌ಸಿಯನ್ನು ಸರಿಯಾಗಿ ನಿರ್ವಹಿಸುವುದು ಹೇಗೆ? ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲೂ ಒಬ್ಬ ಅಭ್ಯರ್ಥಿಯಿಂದ 30-40 ಲಕ್ಷ ರೂ ಪಡೆಯಲಾಗುತ್ತಿದೆ. ಕರ್ನಾಟಕದಲ್ಲಿ ಬುಲ್ಡೋಜರ್ ಸಂಸ್ಕೃತಿಯನ್ನು ಪರಿಚಯಿಸುತ್ತಿರುವುದು ಕೆಟ್ಟ ಸಂಕೇತವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
PublicNext
26/04/2022 03:59 pm