ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಿಎಸ್‌ಐ ಮರುಪರೀಕ್ಷೆಗೆ ಶೀಘ್ರವೇ ದಿನಾಂಕ ಪ್ರಕಟ: ಗೃಹ ಸಚಿವ ಜ್ಞಾನೇಂದ್ರ

ಶಿವಮೊಗ್ಗ: ಇತ್ತೀಚಿಗೆ ನಡೆದಿದ್ದ ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದ ಕಾರಣ, ಪರೀಕ್ಷೆಯನ್ನು ರದ್ದುಪಡಿಸಿತ್ತು. ಇದರ ಮರುಪರೀಕ್ಷೆಯ ದಿನಾಂಕವನ್ನು ಶೀಘ್ರವೇ ಪ್ರಕಟಿಸಲಾಗುವುದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್ಐ ನೇಮಕಾತಿ ಅಕ್ರಮ ಸಂಬಂಧ ಈಗಾಗಲೇ ಸಿಐಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣದಲ್ಲಿ ಹಲವರನ್ನು ಬಂಧಿಸಿದ್ದಾರೆ. ದಿನ ದಿನಕ್ಕೂ ಅಕ್ರಮ ಕುರಿತ ಮಾಹಿತಿಗಳು ಒಂದೊಂದಾಗಿ ಹೊರ ಬರ್ತಾ ಇವೆ ಎಂದರು. ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರೋದು ಸ್ಪಷ್ಟವಾದ ಬಳಿಕವೇ ಮರು ಪರೀಕ್ಷೆಗೆ ನಿರ್ಧರಿಸಲಾಗಿದೆ. ನಾವು 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಯನ್ನೇ ರದ್ದು ಮಾಡಿಲ್ಲ. ಬದಲಾಗಿ ಅಕ್ರಮದ ಕಾರಣ ಪರೀಕ್ಷೆ ರದ್ದು ಮಾಡಿ, ಮರು ಪರೀಕ್ಷೆ ಮಾಡುತ್ತಿದ್ದೇವೆ ಎಂದರು.

ಪ್ರತಿಭಾವಂತರಿಗೆ ನಷ್ಟ ಉಂಟಾಗಬಾರದು. ಅಕ್ರಮದಲ್ಲಿ ಭಾಗಿಯಾದವರಿಗೆ ಮರು ಪರೀಕ್ಷೆಯಲ್ಲಿ ಅವಕಾಶ ನೀಡುತ್ತಿಲ್ಲ. ಕಾನೂನು ಕ್ರಮ ಅವರ ವಿರುದ್ಧ ಕೈಗೊಳ್ಳಲಾಗುತ್ತದೆ. ಮರು ಪರೀಕ್ಷೆಯ ಸಂಬಂಧ ಶೀಘ್ರವೇ ಪರೀಕ್ಷಾ ದಿನಾಂಕವನ್ನು ಪ್ರಕಟಿಸಲಾಗುತ್ತದೆ ಎಂದು ಹೇಳಿದರು.

Edited By : Nagaraj Tulugeri
PublicNext

PublicNext

30/04/2022 05:04 pm

Cinque Terre

46.94 K

Cinque Terre

7

ಸಂಬಂಧಿತ ಸುದ್ದಿ