ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸರ್ಕಾರದ ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಪ್ರಮುಖ ಇಲಾಖೆ ಅಧಿಕಾರಿಗಳೊಂದಿಗೆ ಸಿಎಂ ಸಭೆ

ಬೆಂಗಳೂರು: ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದೆ. ಮೇ 04 -2022-23 ನೇ ಸಾಲಿನ ಆಯವ್ಯಯದಲ್ಲಿ ಮಾಡಿರುವ ಘೋಷಣೆಗಳ ಅನುಷ್ಠಾನಕ್ಕೆ ಇನ್ನಷ್ಟು ವೇಗ ನೀಡಲು ನಿರ್ಧರಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬೆಂಗಳೂರಿನಲ್ಲಿ ಹಲವು ಪ್ರಮುಖ ಇಲಾಖೆಗಳ ಅಧಿಕಾರಿಗಳ ಜತೆ ಪರಿಶೀಲನಾ ಸಭೆ ನಡೆಸಿದರು.

ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಈ ಕೆಳಗಿನ ಸೂಚನೆಗಳನ್ನು ನೀಡಲಾಗಿದೆ.

1. ಹುಬ್ಬಳ್ಳಿಯಲ್ಲಿ 250 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಜಯದೇವ ಹೃದ್ರೋಗ ಆಸ್ಪತ್ರೆಯ ಪ್ರಾದೇಶಿಕ ಕೇಂದ್ರಕ್ಕೆ ಆಗಸ್ಟ್ 15 ರೊಳಗೆ ಶಂಕುಸ್ಥಾಪನೆ ನೆರವೇರಿಸಲು ಅಗತ್ಯ ಕ್ರಮ ವಹಿಸುವುದು.

2. ಇದರ ಜೊತೆಯಲ್ಲಿಯೇ ರಾಜೀವ್ ಗಾಂಧಿ ವೈದ್ಯಕೀಯ ವಿಶ್ವವಿದ್ಯಾಲಯದಿಂದ ಅಗತ್ಯವಿರುವ ಪಿಜಿ ಸ್ಥಾನಗಳ ಬಗ್ಗೆ ಮಾಹಿತಿ ಪಡೆಯಲು ಸೂಚಿಸಿದರು.

3. ರಾಮನಗರ ಜಿಲ್ಲೆಯ ಅರ್ಚಕರಹಳ್ಳಿಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಪ್ರಕ್ರಿಯೆಗಳನ್ನು ಕೂಡಲೇ ಪೂರ್ಣಗೊಳಿಸಿ ಜೂನ್ ಅಂತ್ಯದೊಳಗೆ ಕಾಲೇಜು ನಿರ್ಮಾಣ ಕಾರ್ಯ ಪ್ರಾರಂಭಿಸಬೇಕು.

4. ಸೋಮವಾರದೊಳಗೆ ನಿರ್ಮಾಣ ಕಾರ್ಯಕ್ಕೆ ಅಗತ್ಯವಿರುವ ಎಲ್ಲಾ ಅನುಮೋದನೆಗಳನ್ನು ಪಡೆಯುವುದು.

5. ಬಜೆಟ್ ಘೋಷಣೆಯಂತೆ ಬೆಂಗಳೂರಿನಲ್ಲಿ ಅಗಾಂಗ ದಾನ ಕೇಂದ್ರವನ್ನು ಪ್ರಾರಂಭಿಸಲಾಗಿದ್ದು, ನಿಮ್ಹಾನ್ಸ್ ಮೂಲಕ ಅಂಗಾಂಗ ದಾನ ಪ್ರಕ್ರಿಯೆಯನ್ನು ಈ ವರ್ಷವೇ ಪ್ರಾರಂಭಿಸಲು ಸೂಚನೆ.

7. ಚಿತ್ರದುರ್ಗದಲ್ಲಿ ನೂತನ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಕೈಗೊಳ್ಳಲಾಗಿರುವ ಪ್ರಕ್ರಿಯೆಗಳಿಗೆ ವೇಗ ನೀಡುವುದು.

Edited By : Nagaraj Tulugeri
PublicNext

PublicNext

04/05/2022 06:17 pm

Cinque Terre

32.67 K

Cinque Terre

2

ಸಂಬಂಧಿತ ಸುದ್ದಿ