ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಠ್ಯ ಪುಸ್ತಕದಿಂದ ತಮ್ಮ ಪಠ್ಯ ತೆಗೆದು ಹಾಕುವಂತೆ ದೇವನೂರು ಮಹಾದೇವ ಮನವಿ

ಬೆಂಗಳೂರು: ಹಿರಿಯ ಸಾಹಿತಿ ದೇವನೂರು ಮಹಾದೇವ ರಾಜ್ಯ ಸರ್ಕಾರದ ನೂತನ ಪಠ್ಯ ಪರಿಷ್ಕರಣೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಹಾಗೂ ಪಠ್ಯ ಪುಸ್ತಕದಲ್ಲಿ ಸೇರಿಸಲಾಗಿರುವ ತಮ್ಮ ಪಠ್ಯವನ್ನು ತೆಗೆದು ಹಾಕುವಂತೆ ಅವರು ಪತ್ರ ಮುಖೇನ ಮನವಿ ಮಾಡಿದ್ದಾರೆ.

ಆರ್‌ಎಸ್‌ಎಸ್ ಸಂತಾನವಾದ ಬಿಜೆಪಿ ಆಳ್ವಿಕೆಯಲ್ಲಿ ಮೊದಲು ಕೈ ಹಾಕುವುದೇ ಶಿಕ್ಷಣ ಮತ್ತು ಇತಿಹಾಸಗಳ ಕುತ್ತಿಗೆಗೆ ನೂತನ ಪಠ್ಯ ಪರಿಷ್ಕರಣೆಯಲ್ಲಿಯೂ ಇದೇ ಆಗಿದೆ ಎಂದು ದೇವನೂರು ಮಹಾದೇವ ದೂಷಿಸಿದ್ದಾರೆ.

ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯಲ್ಲಿ ಬಹುತ್ವ ಭಾರತ ಕಾಣೆಯಾಗಿದೆ. ಸಮಿತಿಯ ಅಧ್ಯಕ್ಷ ತನಗೆ ಜಾತಿ ಗೊತ್ತಿಲ್ಲ ಎನ್ನುವ ಮೂಲಕ ತಮ್ಮದೇ ಜಾತಿಯವರನ್ನು ತುಂಬಿಕೊಂಡಿದ್ದಾರೆ. ಪಠ್ಯ ಪರಿಷ್ಕರಣೆಯ ವಾದ ವಿವಾದಗಳು ನಡೆಯುತ್ತಿದೆ. ಹತ್ತನೆ ತರಗತಿ ಕನ್ನಡ ಪಠ್ಯಪುಸ್ತಕದಲ್ಲಿ ನನ್ನದೂ ಒಂದು ಕಥನ ಸೇರಿದೆ ಎನ್ನಲಾಗುತ್ತಿದೆ. ಪಠ್ಯದ ಪಿಡಿಎಫ್ ಬರಹಗಳನ್ನು ಇಲ್ಲ ಅಂತ, ಉಂಟು ಅಂತ, ಕೆಲವು ಸಲ ಸೇರಿದನ್ನು ಕೈ ಬಿಡುವುದು, ಮತ್ತೆ ಸೇರಿಸುವುದು ಇತ್ಯಾದಿ ಗಳಿಗೆ ಗಳಿಗೆಗೂ ಬದಲಾಗುತ್ತಿದೆ. ಇರಲಿ, ನನ್ನ ಕಥನದ ಭಾಗ ಪಠ್ಯದಲ್ಲಿ ಸೇರಿಸಿರದಿದ್ದರೆ ನನಗೆ ಹೆಚ್ಚು ಸಂತೋಷವಾಗುತ್ತದೆ. ಸೇರಿದರೆ ಅದಕ್ಕೆ ನನ್ನ ಒಪ್ಪಿಗೆ ಇಲ್ಲ ಎಂದು ಸ್ಪಷ್ಟಪಡಿಸುವುದಕ್ಕಾಗಿ ಈ ಪ್ರಕಟಣೆ ನೀಡುತ್ತಿದ್ದೇನೆ. ಈ ಹಿಂದೆ ಹಳೇ ಪಠ್ಯಕ್ಕೆ ನೀಡಿದ ಅನುಮತಿಯನ್ನು ಹಿಂತೆಗೆದುಕೊಂಡಿದ್ದೇನೆ ದೇವನೂರು ಮಹಾದೇವ ಸ್ಪಷ್ಟವಾಗಿ ಹೇಳಿದ್ದಾರೆ.

Edited By : Nagaraj Tulugeri
PublicNext

PublicNext

24/05/2022 04:48 pm

Cinque Terre

53.8 K

Cinque Terre

3

ಸಂಬಂಧಿತ ಸುದ್ದಿ