ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪರಿಷ್ಕೃತ ಪಠ್ಯ ವಾಪಸ್ ಪಡೆಯುವಂತೆ ಒತ್ತಾಯಿಸಿ ಸರಕಾರಕ್ಕೆ ಪತ್ರ ಬರೆದ ಸಿದ್ದರಾಮಯ್ಯ

ಬೆಂಗಳೂರು: ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸಮರ್ಥನೆ ವಿರುದ್ಧ ಮಾಜಿ ಸಿಎಂ ಸಿದ್ಧರಾಮಯ್ಯ ಸಿಡಿದೆದ್ದಿದ್ದಾರೆ. ಶಾಲಾ ಪಠ್ಯಪುಸ್ತಕಗಳಲ್ಲಿ ಆದಂತ ವಿವಾದದ ಹೊಣೆ ಹೊತ್ತು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ರಾಜೀನಾಮೆ ಪಡೆಯುವಂತೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ, ಸಿದ್ಧರಾಮಯ್ಯ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಮಹಿಳೆಯರ ಬಗ್ಗೆ ಕನಿಷ್ಠ ಗೌರವವೂ ಇಲ್ಲದಂತೆ ಬಹಿರಂಗ ಪೋಸ್ಟ್‌ಗಳನ್ನು ಹಾಕಿ, ಅಸಹ್ಯವಾಗಿ ಸಂಭ್ರಮಿಸುವ ವ್ಯಕ್ತಿಯನ್ನು ಪಠ್ಯ ಪರಿಷ್ಕರಣೆ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಿ, ನಾಡಿನ ಸಾಂಸ್ಕೃತಿಕ ಪರಂಪರೆಗೆ ದ್ರೋಹ ಎಸಗಿದ್ದು, ಸರ್ಕಾರ ಮಾಡಿದ ಗಂಭೀರ ಅಪರಾಧವಾಗಿದೆ ಎಂದು ಕಿಡಿಕಾರಿದ್ದಾರೆ. ಪಠ್ಯಗಳಲ್ಲಿ ಬಸವಣ್ಣ, ನಾರಾಯಣಗುರು, ಅಂಬೇಡ್ಕರ್, ಕುವೆಂಪು, ಸ್ವಾಮಿ ವಿವೇಕಾನಂದ, ಸಾವಿತ್ರಿ ಬಾಯಿ ಪುಲೆ, ರಾಣಿ ಅಬ್ಬಕ್ಕ ಮುಂತಾದ ಈ ನೆಲದ ನಿಜವಾದ ಜ್ಞಾನ ಪರಂಪರೆ ಮತ್ತು ಆಧ್ಯಾತ್ಮ ಪರಂಪರೆಯ ಹಲವು ಮಹಾತ್ಮರ ಕುರಿತಾದ ಪಠ್ಯಗಳನ್ನು ತೆಗೆದು, ಹಾಕಿರುವುದಕ್ಕೆ, ಇದುವರೆಗೆ ಸರ್ಕಾರ ಕ್ಷಮೆ ಕೇಳಿಲ್ಲ. ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುತ್ತೇವೆ ಎನ್ನುವ ಭರವಸೆಯನ್ನು ನೀಡಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಕೂಡಲೇ ವಿಸರ್ಜನೆಗೊಂಡಿರುವ ಸಮಿತಿ ರೂಪಿಸಿರುವ ಪಠ್ಯಪುಸ್ತಕಗಳನ್ನು ತಡೆ ಹಿಡಿಯಬೇಕು. ಈ ಸಮಿತಿಯ ತಪ್ಪುಗಳನ್ನು ಉನ್ನತ ಮಟ್ಟದ ಸಮಿತಿಯಿಂದ ವರದಿ ತರಿಸಿಕೊಳ್ಳಬೇಕು. ಹಿಂದಿನ ಬರಗೂರು ಸಮಿತಿ ಪಠ್ಯಗಳನ್ನೇ ಈ ಸಾಲಿಗೂ ಮುಂದುವರೆಸಬೇಕು. ಇಷ್ಟೆಲ್ಲಾ ಯಡವಟ್ಟುಗಳಿಗೆ ಕಾರಣರಾದ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರ ರಾಜೀನಾಮೆಯನ್ನು ಕೂಡಲೇ ಪಡೆಯಬೇಕು ಎಂಬುದಾಗಿ ಒತ್ತಾಯಿಸಿದ್ದಾರೆ.

Edited By : Nagaraj Tulugeri
PublicNext

PublicNext

06/06/2022 07:17 pm

Cinque Terre

126.85 K

Cinque Terre

4

ಸಂಬಂಧಿತ ಸುದ್ದಿ