ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಚಿವ ನಾಗೇಶ್‌ ಮನುಷ್ಯತ್ವ ಇಲ್ಲದ ಅವಿವೇಕಿ: ಸಿದ್ದರಾಮಯ್ಯ

ಬೆಂಗಳೂರು: ಮಕ್ಕಳು ಶೂ ಸಾಕ್ಸ್‌ಗಾಗಿ ಶಾಲೆಗೆ ಬರ್ತಾರಾ? ಎಂದು ಪ್ರಶ್ನಿಸಿದ್ದ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ವಿರೋಧ ಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸರಕಾರಿ ಶಾಲೆ ಮಕ್ಕಳು ಶಾಲೆಗೆ ಶೂ ಧರಿಸಿ ಬರಬಾರದಾ? ಎಂಬುದು ಕೆಲ ನಾಯಕರ ಪ್ರಶ್ನೆಯಾಗಿದೆ.

ಸಚಿವರ ಈ ಹೇಳಿಕೆ ಬಗಗ್ಎ ಮಾಜಿ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಶಿಕ್ಷಣ ವಿರೋಧಿ ಶಿಕ್ಷಣ ಸಚಿವರನ್ನು ಸಂಪುಟದಿಂದ ಕಿತ್ತು ಹಾಕಿ ಎಂದು ಒತ್ತಾಯಿಸಿದ್ದಾರೆ. ಸಿದ್ದರಾಮಯ್ಯ ಮಾಡಿದ ಟ್ವೀಟ್ ಈ ಕೆಳಗಿನಂತಿದೆ.

'ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೇ, ಅವರ ನಿದ್ದೆ ಬಿಡಿಸಬೇಕಾದರೆ ನಾವು ಎಚ್ಚರಿಸಬೇಕಾಯಿತು. ಬಡ ಶಾಲಾ ಮಕ್ಕಳಿಂದ ಶೂ-ಸಾಕ್ಸ್‌ಗಳನ್ನೂ ಕಿತ್ತುಕೊಳ್ಳಲು ಹೊರಟಿದ್ದ ಮನುಷ್ಯತ್ವವೇ ಇಲ್ಲದ ಅವಿವೇಕಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮಾಡುತ್ತಿರುವ ಎಡವಟ್ಟುಗಳು ಒಂದೋ, ಎರಡೋ? ಮೊದಲು ಈ ಶಿಕ್ಷಣ ವಿರೋಧಿಯನ್ನು ಸಂಪುಟದಿಂದ ಕಿತ್ತು ಹಾಕಿ' ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

Edited By : Nagaraj Tulugeri
PublicNext

PublicNext

09/07/2022 04:47 pm

Cinque Terre

62.48 K

Cinque Terre

13