ಬೆಂಗಳೂರು: ಯಾವುದೇ ಕಾರಣಕ್ಕೂ ಕ್ಯಾಂಪಸ್‌ನಲ್ಲಿ ಧಾರ್ಮಿಕ ಆಚರಣೆಗಳಿಗೆ ಅವಕಾಶ ಇಲ್ಲ. ಕಾಲೇಜಿನಲ್ಲಿ ವಸ್ತ್ರ ಸಂಹಿತೆ ಮಾಡುವ ನಿರ್ಧಾರಕ್ಕೆ ಬಂದಿದ್ದೇವೆ. ಹಿಜಾಬ್ ವಿವಾದದ ಹಿಂದೆ ದೊಡ್ಡದಾದ ರಾಜಕೀಯ ಹುನ್ನಾರವಿದೆ. ಕಾಂಗ್ರೆಸ್ ನಾಯಕರು ಈ ವಿವಾದವನ್ನು ನೀರೆರೆದು ಪೋಷಿಸುತ್ತಿದ್ದಾರೆ ಎಂದು ಸಚಿವ ಸುನಿಲ್‌ಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ನಡೆಯುವ ಈ ವಿಚಾರಕ್ಕೆ ದೇಶದ ಮತ್ತೊಂದು ಮೂಲೆಯಲ್ಲಿರುವವರು ಪ್ರತಿಕ್ರಿಯೆ ನೀಡಿದ್ದಾರೆ. ಹೀಗಾಗಿ ಇದರ ಹಿಂದಿನ ಹಿಡನ್ ಅಜೆಂಡಾ ಏನು ಅಂತ ಅರ್ಥ ಮಾಡಿಕೊಳ್ಳಿ. ಇದೆಲ್ಲವನ್ನೂ ಮುಸ್ಲಿಂ ಸಂಘಟನೆಗಳು ಹುಟ್ಟು ಹಾಕಿವೆ. ಅದಕ್ಕೆ ಕಾಂಗ್ರೆಸ್ ನಾಯಕರು ಮತ್ತಷ್ಟು ಕುಮ್ಮಕ್ಕು ನೀಡಿದ್ದಾರೆ. ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರನ್ನು ಗೇಟ್‌ನಿಂದ ಹೊರಗೆ ನಿಲ್ಲಿಸಿದ ಪ್ರಾಂಶುಪಾಲರ ನಡೆಯನ್ನು ಸಮರ್ಥಿಸಿಕೊಳ್ಳುತ್ತೇನೆ. ಇದಕ್ಕೊಂದು ತಾರ್ತಿಕ ಅಂತ್ಯ ಕಾಣಿಸುವ ಅಗತ್ಯವಿದೆ. ನಾವೆಲ್ಲಾ ಸೇರಿ ಸಿಎಂ ಜೊತೆ ಮಾತನಾಡಿ ಒಂದು ನಿರ್ಧಾರಕ್ಕೆ ಬರುತ್ತೇವೆ ಎಂದು ಸುನಿಲ್‌ಕುಮಾರ್ ಹೇಳಿದ್ದಾರೆ.
PublicNext
04/02/2022 03:57 pm