ದಾವಣಗೆರೆ: ಹಿಜಾಬ್ ಧರಿಸಲು ಅವಕಾಶ ನೀಡಬಾರದು ಎಂದು ಒತ್ತಾಯಿಸಿ ಹಿಂದೂ ಜಾಗರಣ ವೇದಿಕೆ ಹಾಗೂ ಹಿಂದೂ ಯುವ ವಾಹಿನಿ ನೇತೃತ್ವದಲ್ಲಿ ಹಿಂದೂ ವಿದ್ಯಾರ್ಥಿನಿಯರು ಕೇಸರಿ ಶಾಲು ಧರಿಸಿ ಪ್ರತಿಭಟನೆ ನಡೆಸಿದರು.
ಜಿಲ್ಲೆಯ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಹೆಗ್ಗುರುತಾದ ಸಮವಸ್ತ್ರಧಾರಣೆ ಕಡ್ಡಾಯಗೊಳಿಸಬೇಕು. ಕೆಲ ಮತೀಯ ಸಂಘಟನೆಗಳು, ಶಾಲಾ ಶೈಕ್ಷಣಿಕ ಸಾಮರಸ್ಯ ಕದಡುವ ಉದ್ದೇಶದಿಂದ ಒಂದು ಕೋಮಿನ ವಿದ್ಯಾರ್ಥಿಗಳನ್ನು ಪ್ರಚೋದನೆಗೆ ಒಳಪಡಿಸಿ ಬುರ್ಕಾ, ಹಿಜಾಬ್ ಧರಿಸಿ ಕಾಲೇಜಿನ ಆವರಣದೊಳಗೆ ಪ್ರವೇಶಿಸುವಂತೆ ಮಾಡುವ ಪ್ರಯತ್ನ ನಡೆಯುತ್ತಿವೆ. ಅಲ್ಲದೇ ದಿನದಿಂದ ದಿನಕ್ಕೆ ಹಿಜಾಬ್ ವಿಷಯ ನೆಪವಾಗಿಟ್ಟುಕೊಂಡು ಇದೊಂದು ಅಂತಾರಾಷ್ಟ್ರೀಯ ಸಮಸ್ಯೆ ಎನ್ನುವ ರೀತಿಯಲ್ಲಿ ಬಿಂಬಿಸುವ ಕೆಲಸವೂ ನಡೆಯುತ್ತಿದೆ. ಇದರ ಹಿಂದೆ ಮತೀಯ ಸಂಘಟನೆಗಳ ಕೈವಾಡವಿರುವುದು ಈಗ ಜಗಜ್ಜಾಹೀರಾಗಿದ್ದು,ಯಾವುದೇ ಕಾರಣಕ್ಕೂ ಶಾಲಾ ಕಾಲೇಜುಗಳಲ್ಲಿ ಬುರ್ಕಾ ಹಾಗೂ ಹಿಜಾಬ್ ಧರಿಸಲು
ಅವಕಾಶ ಕೊಡಬಾರದು ಎಂದು ಒತ್ತಾಯಿಸಿದರು.
ಒಂದು ವೇಳೆ ಸರ್ಕಾರ ಹಾಗೂ ಶಿಕ್ಷಣ ಇಲಾಖೆಯು ಹಿಜಾಬ್ ವಿವಾದ ಹುಟ್ಟುಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಷಡ್ಯಂತ್ರಕ್ಕೆ ಮಣಿದು ಹಿಜಾಬ್ ಧರಿಸಲು ಅವಕಾಶ ನೀಡಿದರೆ, ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಹಿಂದೂ ವಿದ್ಯಾರ್ಥಿಗಳನ್ನು ಸಂಘಟಿಸಿ, ಸಮವಸ್ತ್ರದ ಜೊತೆಗೆ ಕೇಸರಿ ಶಲ್ಯ ಧರಿಸುವ ಅಭಿಯಾನವನ್ನು ಕೈಗೊಳ್ಳಬೇಕಾಗುತ್ತದೆ. ಜೊತೆಗೆ ಉಗ್ರ ಹೋರಾಟ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
PublicNext
07/02/2022 05:02 pm