ಬೆಂಗಳೂರು: ಭಾರತ ಅಷ್ಟೇ ಅಲ್ಲದೆ ವಿಶ್ವಾದ್ಯಂತ ಕೊರೊನಾ ರೂಪಾಂತರ ಆತಂಕ ಹುಟ್ಟಿಸಿದೆ. ಹೀಗಿರುವಾಗ ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭವಾಗುತ್ತಾ ಎನ್ನುವ ಗೊಂದಲಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸ್ಪಷ್ಟನೆ ನೀಡಿದ್ದಾರೆ.
ಸಿಎಂ ಯಡಿಯೂರಪ್ಪ ಅವರು ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ದೃಷ್ಟಿಯಿಂದ 10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜು ಆರಂಭ ಮಾಡಲಾಗುತ್ತದೆ ಎಂದು ಈಚೆಗಷ್ಟೇ ಪ್ರಕಟಿಸಿದ್ದರು. ಆದರೆ ಪೋಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಗೊಂದಲ ಉಂಟಾಗಿತ್ತು. ಈ ಬಗ್ಗೆ ಇಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿಗಳು, ಹಿಂದಿನ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ. ನಿಗದಿಯಂತೆಯೇ ಜನವರಿ 1ರಿಂದ 10 ಮತ್ತು 12ನೇ ತರಗತಿಗಳನ್ನು ಆರಂಭಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಶಾಲೆ ಆರಂಭದ ವಿಷಯದಲ್ಲಿ ಸರ್ಕಾರದ ಕಡೆಯಿಂದ ಯಾವುದೇ ಬದಲಾವಣೆ ಇಲ್ಲ. ಮುಂಜಾಗ್ರತಾ ಕ್ರಮಗಳೊಂದಿಗೆ ಶಾಲಾ-ಕಾಲೇಜು ಆರಂಭಿಸಲು ತಜ್ಞರು ಸಲಹೆ ನೀಡಿದ್ದಾರೆ. ಹೀಗಾಗಿ ಶಾಲೆ ಮತ್ತು ಕಾಲೇಜುಗಳ ಪ್ರಾರಂಭ ಮಾಡಲಾಗುವುದು. ಕೊರೊನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಲ್ಲಾ ಶಾಲಾ-ಕಾಲೇಜುಗಳಿಗೆ ಹೇಳಲಾಗಿದೆ ಎಂದು ಹೇಳಿದರು.
PublicNext
28/12/2020 04:01 pm