ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜ.11ರಿಂದ ಆಕಾಶವಾಣಿ‌ಯಲ್ಲಿ ‘ಕಲಿಯುತ್ತಾ ನಲಿಯೋಣ’ ಶುರು: ಸುರೇಶ್‌ಕುಮಾರ್

ಬೆಂಗಳೂರು: ಆಕಾಶವಾಣಿ ಮೂಲಕ ಜನವರಿ 11ರಿಂದ ‘ಕಲಿಯುತ್ತಾ ನಲಿಯೋಣ’ ಎಂಬ ಹೊಸ ಕಾರ್ಯಕ್ರಮವನ್ನು ಶಿಕ್ಷಣ ಇಲಾಖೆ ಆರಂಭಿಸುತ್ತಿದೆ‌ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್ ಕುಮಾರ್‌ ಹೇಳಿದ್ದಾರೆ.

‘ಒಂದನೇ ತರಗತಿಯಿಂದ ನಾಲ್ಕನೇ ತರಗತಿಯವರೆಗೆ ಇರುವ ಮಕ್ಕಳಿಗಾಗಿ ಇರುವ ‘ನಲಿಕಲಿ’ ಮತ್ತು ‘ಕಲಿನಲಿ’ ಕಾರ್ಯಕ್ರಮಗಳನ್ನು ಜ. 11ರಿಂದ ಏಪ್ರಿಲ್ 5ರವರೆಗೆ ಆಕಾಶವಾಣಿ ಪ್ರಸಾರ ಮಾಡಲಿದೆ. ಪ್ರತಿ ವಾರ ಸೋಮವಾರದಿಂದ ಶುಕ್ರವಾರದವರೆಗೂ ನಿತ್ಯ ಬೆಳಿಗ್ಗೆ 10 ಗಂಟೆಯಿಂದ 10:15 ರವರೆಗೆ ಒಂದು ಮತ್ತು ಎರಡನೇ ತರಗತಿಗಳಿಗಾಗಿ ಹಾಗೂ 10:15ರಿಂದ 10.30 ಗಂಟೆಯವರೆಗೂ 3 ಮತ್ತು 4ನೇ ತರಗತಿಗಳಿಗಾಗಿ ಹಾಡು, ಕಥೆ, ನಾಟಕ, ಸಂಭಾಷಣೆ, ಒಗಟು, ಮತ್ತು ವಿವಿಧ ಆಸಕ್ತಿಕರ ಕಾರ್ಯಕ್ರಮಗಳ ಮೂಲಕ ಆಯಾ ತರಗತಿಗಳ ಮಕ್ಕಳ ಕಲಿಕೆ ಮುಂದುವರಿಯುವಂತೆ ಮಾಡಲು ಶಿಕ್ಷಣ‌ ಇಲಾಖೆ ಈ ಕಾರ್ಯಕ್ರಮ ಹಮ್ಮಿಕೊಂಡಿದೆ’ ಎಂದು ಸಚಿವರು ತಿಳಿಸಿದ್ದಾರೆ.

‘ಮಕ್ಕಳಿಂದ ಯಾವುದಾದರೂ ಕತೆ ಹಾಡು ಒಗಟು ಹೇಳಬಹುದಾದರೆ ವಾಟ್ಸಾಪ್ ನಂಬರ್ 9449417612 ಗೆ ಕಳಿಸಿದರೆ ಅದನ್ನು ಪ್ರಸಾರ ಮಾಡಲಾಗುವುದು. ಈ ಕಾರ್ಯಕ್ರಮ ರಾಜ್ಯದ 13 ಆಕಾಶವಾಣಿ ಕೇಂದ್ರಗಳಿಂದ ಪ್ರಸಾರವಾಗುತ್ತದೆ. ಮತ್ತು ಈ ಕಾರ್ಯಕ್ರಮಗಳು ಯೂಟ್ಯೂಬ್‌ನಲ್ಲಿ ಕೂಡಾ ಲಭ್ಯವಿರುತ್ತವೆ. ಹೀಗಾಗಿ ಪೋಷಕರು ತಮ್ಮ ಮಕ್ಕಳನ್ನು ಪ್ರೋತ್ಸಾಹಿಸಬೇಕು’ ಮನವಿ ಮಾಡಿಕೊಂಡಿದ್ದಾರೆ.

Edited By : Vijay Kumar
PublicNext

PublicNext

09/01/2021 02:17 pm

Cinque Terre

57.37 K

Cinque Terre

1

ಸಂಬಂಧಿತ ಸುದ್ದಿ