ಬೆಂಗಳೂರು: ಅನುದಾನಿತ ಶಾಲೆಗಳ ಶುಲ್ಕವನ್ನು ಅಂತಿಮವಾಗಿ ಇನ್ನೆರಡು ದಿನಗಳಲ್ಲಿ ನಿಗದಿಪಡಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಬುಧವಾರ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಶುಲ್ಕ ನಿಗದಿ ಪಡಿಸುವ ಕುರಿತು ಎಲ್ಲಾ ಅಂಶಗಳನ್ನು ಪರಿಗಣಿಸಬೇಕಿದೆ. ಒಂದೆಡೆ ಕೊರೋನಾದಿಂದ ಸಂಕಷ್ಟಕ್ಕೆ ಸಿಲುಕಿರುವ ಪೋಷಕರ ಆರ್ಥಿಕ ಸ್ಥಿತಿಗತಿ ಹಾಗೂ ಹದಗೆಟ್ಟಿರುವ ಅನುದಾನಿತ ಮತ್ತು ಖಾಸಗಿ ಶಾಲೆಗಳ ಸ್ಥಿತಿಗತಿಗಳನ್ನು ಕೂಡ ಪರಿಗಣಿಸಬೇಕಿದೆ ಎಂದರು.
ಇದೆಲ್ಲದರ ಬಗ್ಗೆ ತಾಂತ್ರಿಕ ಸಲಹಾ ಸಮಿತಿಯು ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಈ ವರದಿಯನ್ನು ಇನ್ನೂ ಪರಿಶೀಲಿಸಿಲ್ಲ. ಯಾರಿಗೂ ಅನ್ಯಾಯವಾಗದಂತೆ ಶುಲ್ಕ ನಿಗದಿಪಡಿಸಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
PublicNext
20/01/2021 07:06 pm