ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ ವಿಶೇಷ ಶೈಕ್ಷಣಿಕ ವಲಯ ಸ್ಥಾಪಿಸುವ ಉದ್ದೇಶ ಇದೆ. ಈ ಮೂಲಕ ಶೈಕ್ಷಣಿಕ ಅಭಿವೃದ್ಧಿಗಾಗಿ 10 ಸಾವಿರ ಶಿಕ್ಷಕರ ನೇಮಕಾತಿಗೆ ರಾಜ್ಯ ಮುಂಗಡ ಪತ್ರದಲ್ಲಿ ಅವಕಾಶ ಕಲ್ಪಿಸುವಂತೆ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಪ್ರಾಥಿಕ ಹಾಗೂ ಪ್ರೌಡ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಸಮ್ಮುಖದಲ್ಲಿ ಗುರುವಾರ ನಡೆದ ಬಜೆಟ್ ಪೂರ್ವಭಾವಿ ಸಭೆಯ ಬಳಿಕ ಮಾತನಾಡಿದ ಅವರು, ‘ರಾಷ್ಟ್ರೀಯ ಶಿಕ್ಷಣ ನೀತಿಯ ಅಳವಡಿಕೆ ಉದ್ದೇಶದಿಂದ ನೀತಿ ನಿರೂಪಣೆಗೆ ಶಿಕ್ಷಣ ಆಯೋಗ ಸ್ಥಾಪನೆ, 50 ವರ್ಷ ಹಳೆಯ 14,613 ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಕಟ್ಟಡಗಳ ಹಾಗೂ 634 ಸರ್ಕಾರಿ ಪ್ರೌಢಶಾಲೆಗಳ ಕಟ್ಟಡ ನಿರ್ವಹಣೆಗೆ ಅನುದಾನ ನೀಡುವಂತೆಯೂ ಮನವಿ ಮಾಡಲಾಗಿದೆ’ ಎಂದಿದ್ದಾರೆ.
PublicNext
19/02/2021 08:09 am