ಮಂಗಳೂರು: ಬಿಸಿಯೂಟ ಆರಂಭಕ್ಕೆ ಶಿಕ್ಷಣ ಇಲಾಖೆ ಸಿದ್ಧವಾಗಿದೆ. ಆದರೆ ಕೇಂದ್ರ ಸರ್ಕಾರದಿಂದ ಸಮ್ಮತಿ ದೊರೆತಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ನಗರದ ಪುರಭವನದಲ್ಲಿ ಶನಿವಾರ ಮುಖ್ಯ ಶಿಕ್ಷಕರೊಂದಿಗೆ ಸಚಿವರ ಸಂವಾದ ಕಾರ್ಯಕ್ರಮಲ್ಲಿ ಮಾತನಾಡಿದ ಸಚಿವರು, ''1ನೇ ತರಗತಿಯಿಂದಲೇ ಶಾಲೆ ಆರಂಭಿಸಲು ಇಲಾಖೆಯು ಸಿದ್ಧತೆ ನಡೆಸಿದೆ. ಆದರೆ ಆರೋಗ್ಯ ಇಲಾಖೆಯ ತಾಂತ್ರಿಕ ಸಲಹಾ ಸಮಿತಿಯ ಸಮ್ಮತಿ ದೊರೆತಿಲ್ಲ. ಇನ್ನೆರಡು ದಿನಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಲಾಗುವುದು'' ಎಂದು ಮಾಹಿತಿ ನೀಡಿದರು.
PublicNext
27/02/2021 07:59 pm