ಬೆಂಗಳೂರು: ನಾಳೆ ಸೋಮವಾರ (ಆಗಸ್ಟ್ 9) ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.
ಸೋಮವಾರ ಮಧ್ಯಾಹ್ನ 3.30ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಮೊಬೈಲ್ ಎಸ್‍ಎಂಎಸ್ ಮೂಲಕ ವಿದ್ಯಾರ್ಥಿಗಳಿಗೆ ಫಲಿತಾಂಶ ಕಳುಹಿಸಿಕೊಡಲಾಗುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಆಗಸ್ಟ್ 9, ಸೋಮವಾರ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಿಸುವುದಾಗಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸುದ್ದಿಗೋಷ್ಠಿ ನಡೆಸಿ ತಿಳಿಸಿದ್ದಾರೆ. ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಈ ಫಲಿತಾಂಶದ ಬಗ್ಗೆ ಮಾಹಿತಿ ನೀಡಿದ್ದಾರೆ. ಸೋಮವಾರ ಸಂಜೆ 3.30ಕ್ಕೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಿಗದಿಪಡಿಸಲಾಗಿದೆ ಎಂದು ಸಹ ಅವರು ತಿಳಿಸಿದರು.
PublicNext
08/08/2021 07:52 am