ಬೆಂಗಳೂರು: ಇಂದು ರಾಜ್ಯದ ನೂತನ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ನಾಗೇಶ್ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಇಂದು ಮಧ್ಯಾಹ್ನ 3.30ಕ್ಕೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದ್ದು, ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸಂಭಾಗಣದಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸುದ್ದಿಗೋಷ್ಠಿ ನಡೆಸಲಿದ್ದಾರೆ, ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಬಿ.ಸಿ.ನಾಗೇಶ್ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಪರೀಕ್ಷೆ ಚೆನ್ನಾಗಿ ಬರೆದಿರುವ ನಿರೀಕ್ಷೆ ಇದೆ. ವಿದ್ಯಾರ್ಥಿಗಳು ಫಲಿತಾಂಶವನ್ನು ಕೂಲ್ ಆಗಿ ಸ್ವೀಕರಿಸಬೇಕು.
ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳೂ ಪಾಸ್ ಆಗುತ್ತಾರೆ. ಆದರೆ ಫಲಿತಾಂಶವನ್ನು ಸಮತೋಲನದಿಂದ ತೆಗೆದುಕೊಳ್ಳಬೇಕು ಅಂತ ತಿಳಿಸಿದ್ದಾರೆ. ಇನ್ನೂ ಈ ಸಲದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಒಟ್ಟಾರೆ ಹಾಜರಾತಿ 96.65% ರಷ್ಟು ಇತ್ತು. ಕಳೆದ ವಾರ್ಷಿಕ ಪರೀಕ್ಷೆಗಿಂತ ಹೆಚ್ಚು ಮಕ್ಕಳು ಈ ಸಲ ಹಾಜರಾಗಿದ್ದರು. ಇದೀಗ 8 ಲಕ್ಷಕ್ಕೂ ಅಧಿಕ ಮಕ್ಕಳ ಫಲಿತಾಂಶ ಇಂದು ಹೊರಬೀಳಲಿದೆ. ವಿದ್ಯಾರ್ಥಿಗಳ ಎಸ್ಎಂಎಸ್ ಮೂಲಕವೂ ತಮ್ಮ ಫಲಿತಾಂಶ ಪಡೆಯಬಹುದಾಗಿದೆ.
PublicNext
09/08/2021 01:59 pm