ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಷ್ಟ್ರೀಯ ಶಿಕ್ಷಣ ನೀತಿ ವಿರುದ್ಧ ಸಿಡಿದೆದ್ದ ಸಿದ್ದರಾಮಯ್ಯ

ಬೆಂಗಳೂರು: ಪ್ರಥಮ ಭಾಷೆ ಕಲಿಕೆಗೆ ಅಡ್ಡಿಯಾಗುವ ಹಾಗೂ ನಮ್ಮ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಹಾಳುಗೆಡವುವ ರಾಷ್ಟ್ರೀಯ ಶಿಕ್ಷಣ ನೀತಿ-2020 ನಮಗೆ ಬೇಡ. ಈ ಆದೇಶವನ್ನು ಸರ್ಕಾರ ಕೂಡಲೇ ವಾಪಸ್ ಪಡೆಯಬೇಕು ಎಂದು ವಿಧಾನ ಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಯಾವುದೇ ಚರ್ಚೆ ನಡೆಸದೇ ಆದೇಶ ಹೊರಡಿಸಿರುವುದು ಸರ್ವಾಧಿಕಾರಿ ನಿಲುವು, ದೇಶದ ಒಕ್ಕೂಟ ತತ್ವಕ್ಕೆ ಮಾಡಿರುವ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ನಾಡಿನ ಶಿಕ್ಷಣ ತಜ್ಞರು, ಉಪನ್ಯಾಸಕರು, ಹಿರಿಯರು ಮತ್ತು ವಿರೋಧ ಪಕ್ಷಗಳ ಮುಖಂಡರು ಈ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತರಾತುರಿಯಲ್ಲಿ ರಾಜ್ಯದ ಮೇಲೆ ಹೇರಬೇಡಿ, ಸಂಬಂಧಿಸಿದ ವಲಯಗಳ ಜನರ ಜೊತೆಗೆ ವಿಸ್ತೃತ ಚರ್ಚೆ ನಡೆಸಿ, ಸಾಧಕ ಬಾಧಕಗಳನ್ನು ಪರಿಶೀಲಿಸಿದ ನಂತರ ತೀರ್ಮಾನಿಸಿ ಎಂದು‌ ಹೇಳಿದ್ದೆವು.

Edited By : Nagaraj Tulugeri
PublicNext

PublicNext

09/08/2021 03:28 pm

Cinque Terre

45.69 K

Cinque Terre

1

ಸಂಬಂಧಿತ ಸುದ್ದಿ