ಚೆನ್ನೈ: ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ತಮಿಳುನಾಡು ಸರ್ಕಾರ 7.5ಮೀಸಲಾತಿ ಒದಗಿಸುವ ಮಸೂದೆ ಮಂಡಿಸಿದೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಗುರುವಾರ ವಿಧಾನಸಭೆಯಲ್ಲಿ ಈ ಮಸೂದೆಯನ್ನು ಮಂಡಿಸಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಓದಿದ ಎಂಜಿನಿಯರಿಂಗ್, ಕೃಷಿ, ಮೀನುಗಾರಿಕೆ ಮತ್ತು ಕಾನೂನಿನಂತಹ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಈ ಮೀಸಲಾತಿ ಅನ್ವಯವಾಗಲಿದೆ.
ಈ ತಿಂಗಳ ಆರಂಭದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಮೀಸಲಾತಿ ಒದಗಿಸುವ ನಿರ್ಧಾರವನ್ನು ಘೋಷಿಸಿದ್ದರು ಮತ್ತು ಮುಂದಿನ ಬಜೆಟ್ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುವುದು ಎಂದು ಹೇಳಿದ್ದರು.
PublicNext
26/08/2021 03:55 pm