ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಎನ್ಇಪಿಯಲ್ಲಿ‌ ವಿದ್ಯಾರ್ಥಿಗಳಿಗೆ ವಿರುದ್ಧವಾದ ಯಾವುದೇ ಅಂಶಗಳಲಿಲ್ಲ: ಡಾ.ಅಶ್ವತ್ಥ ನಾರಾಯಣ

ಮಂಗಳೂರು: ವಿದ್ಯಾರ್ಥಿಗಳಲ್ಲಿ ಪ್ರಗತಿ ಕಾಣಲು ರಾಷ್ಟ್ರೀಯ ಶಿಕ್ಷಣ ನೀತಿ(ಎನ್ಇಪಿ)ಯ ಅಗತ್ಯವಿದೆ. ಇದರಲ್ಲಿ ವಿದ್ಯಾರ್ಥಿಗಳಿಗೆ ವಿರುದ್ಧವಾದ ಯಾವುದೇ ಅಂಶಗಳಲಿಲ್ಲ. ಕೇಸರೀಕರಣ ಎಂಬ ಮಾತಿನಲ್ಲಿ ಹುರುಳಿಲ್ಲ ಎಂದು ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ಸಿ.ಎನ್. ಹೇಳಿದರು.

ಮಂಗಳೂರು ವಿವಿ‌ ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ  ಪರಿಷತ್ ವತಿಯಿಂದ ಕೊಣಾಜೆಯ ಮಂಗಳಗಂಗೋತ್ರಿಯ ಮಂಗಳ ಸಭಾಂಗಣದಲ್ಲಿ ಸೋಮವಾರ ನಡೆದ ರಾಷ್ಟ್ರೀಯ ಶಿಕ್ಷಣ ನೀತಿ- 2020 ಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಾಗತಿಕ ಮಟ್ಟದಲ್ಲಿಯೇ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ಆಗಬೇಕಾದ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ಪ್ರಧಾನಿ‌ ಮೋದಿಯವರ ನೇತೃತ್ವದಲ್ಲಿ ರೂಪಿಸಲಾದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ 10 ವರ್ಷದೊಳಗೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಶಿಕ್ಷಣದ ಕಲಿಕಾ ನೀತಿ, ಮೌಲ್ಯಮಾಪನ, ಪಠ್ಯಕ್ರಮಗಳಲ್ಲಿ ಸುಧಾರಣೆಯಾಗಬೇಕಿದೆ. ಆದರೆ ಈ ನಿಟ್ಟಿನಲ್ಲಿ ನಾವು ಹೆಚ್ಚಿನ‌ ಆದ್ಯತೆ  ನೀಡಿಲ್ಲ. ಸಕಾಲಕ್ಕೆ ಸೂಕ್ತ ನಿರ್ಣಯ ತೆಗೆಗುಕೊಳ್ಳಬೇಕಿದೆ, ಇಲ್ಲದಿದ್ದರೆ ಸಮಾಜಕ್ಕೆ ಭಾರೀ ನಷ್ಟವಾಗಲಿದೆ. 15 ವರ್ಷಗಳೊಳಗೆ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸಲು ಕೇಂದ್ರ ಸರಕಾರ ನಿರ್ಧರಿಸಿದೆ. ಆದರೆ ರಾಜ್ಯವು‌‌ 10 ವರ್ಷಗಳೊಳಗೆ ಅನುಷ್ಠಾನಗೊಳಿಸುವ ಗುರಿ ಹೊಂದಿದೆ ಎಂದು ಎಂದು ಸಚಿವ ಡಾ.ಅಶ್ವತ್ಥ ನಾರಾಯಣ ಹೇಳಿದರು.

Edited By : Manjunath H D
PublicNext

PublicNext

30/08/2021 05:53 pm

Cinque Terre

81.19 K

Cinque Terre

1

ಸಂಬಂಧಿತ ಸುದ್ದಿ