ನವದೆಹಲಿ: ಉದ್ಯೋಗಾಕಾಂಕ್ಷಿಗಳಿಗೆ ಕೇಂದ್ರ ಶಿಕ್ಷಣ ಸಚಿವಾಲಯ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಕೇಂದ್ರೀಯ ವಿವಿಗಳಲ್ಲಿ 10 ಸಾವಿರಕ್ಕೂ ಹೆಚ್ಚು ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಕೇಂದ್ರೀಯ ವಿವಿಗಳಲ್ಲಿ 10 ಸಾವಿರಕ್ಕೂ ಹೆಚ್ಚು ಬೋಧಕ ಮತ್ತು ಬೋಧಕೇತರ ಹುದ್ದೆಗಳು ಖಾಲಿ ಉಳಿದಿವೆ. ಇವುಗಳನ್ನು ಶೀಘ್ರವೇ ಭರ್ತಿ ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಸಹಾಯಕ ಪ್ರಾಧ್ಯಾಪಕರ ನೇಮಕಕ್ಕೆ ಪಿಎಚ್ ಡಿ ಕಡ್ಡಾಯವಲ್ಲ ಎಂಬ ನಿಂಬಂಧನೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದೆ.ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ವಿಶ್ವವಿದ್ಯಾಲಯಗಳಿಗೆ ಅವಕಾಶ ನೀಡಲು ಕೊರೊನಾ ಹಿನ್ನೆಲೆಯಲ್ಲಿ ಈ ನಿಯಮ ಸಡಿಲಿಸಲಾಗಿದೆಯೆ ಹೊರತು ರದ್ದುಗೊಳಿಸಿಲ್ಲ ಎಂದು ಹೇಳಿದ್ದಾರೆ ಆದರೆ ಸ್ನಾತಕೋತ್ತರ ಪದವಿ ಮತ್ತು ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.
PublicNext
03/10/2021 07:56 am