ಉಡುಪಿ: ಭಗವಂತನ ಅನುಗ್ರಹದಿಂದ ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಕಡಿಮೆಯಾಗುತ್ತಿದ್ದು,
ಹಲವಾರು ಜಿಲ್ಲೆಗಳಲ್ಲಿ ಪಾಸಿಟಿವಿಟಿ ರೇಟ್ ಜೀರೋ ಇದೆ. ಶಾಲೆ ಆರಂಭಿಸಬಹುದು ಎಂದು ತಜ್ಞರು ಅಭಿಪ್ರಾಯ ಕೊಟ್ಟಿದ್ದಾರೆ. ದಸರಾ ಮುಗಿದ ತಕ್ಷಣವೇ ಶಾಲೆಗಳು ಆರಂಭವಾಗಲಿವೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಸಚಿವರು ,ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿ ಟಾಸ್ಕ್ ಫೋರ್ಸ್ ಸಭೆ ಕರೆಯುತ್ತಾರೆ. ಸಿಎಂ ಶೀಘ್ರ ಶಾಲೆ ಆರಂಭಿಸಲು ಆಸಕ್ತಿ ತೋರಿದ್ದಾರೆ.
ದಸರಾ ಮುಗಿದ ತಕ್ಷಣ ಬಿಸಿಯೂಟ ಆರಂಭವಾಗಲಿದೆ. ಆಯಾ ಜಿಲ್ಲೆಯ ಅಧಿಕಾರಿಗಳು ಎಲ್ಲ ವ್ಯವಸ್ಥೆಗಳನ್ನು ಮಾಡಿದ್ದಾರೆ. ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ಮೇರೆಗೆ ಶೀಘ್ರ ಶಾಲೆ ಆರಂಭಿಸುತ್ತೇವೆ.ಎಲ್ಲರಿಗೂ ಶಾಲೆ ಕಡ್ಡಾಯ ಮಾಡಿಲ್ಲ. ಮುಂದೆಯೂ ಕಡ್ಡಾಯ ಮಾಡಲ್ಲ.
ಆನ್ಲೈನ್, ಆಫ್ ಲೈನ್ ಎರಡು ಮಾದರಿಯಲ್ಲಿ ತರಗತಿಗಳು ನಡೆಯಲಿವೆ.ಈಗ ಆರಂಭವಾಗಿರುವ ಶಾಲೆಗಳ ಹಾಜರಾತಿ ತೃಪ್ತಿಕರವಾಗಿದೆ.
ಆನ್ಲೈನ್ ತರಗತಿಯಿಂದ ಕೆಲವು ಗ್ರಾಮೀಣ ಮಕ್ಕಳಿಗೆ ತೊಂದರೆ ಆಗಿದೆ.ಗ್ರಾಮೀಣ ಭಾಗದಲ್ಲಿ ಹೈಸ್ಕೂಲ್ ಮಕ್ಕಳ ಹಾಜರಾತಿ ಶೇ. 90ರಷ್ಟಿದೆ.ದಸರಾದ ಮರುದಿನದಿಂದಲೇ ಎಲ್ಲ ಶಾಲೆಗಳಲ್ಲಿ ಬಿಸಿಯೂಟ ಆರಂಭವಾಗಲಿದೆ ಎಂದು ಹೇಳಿದರು.
PublicNext
08/10/2021 04:17 pm