ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೇಡಿಕೆ ಈಡೇರದಿದ್ದರೆ ದೊಡ್ಡ ಮಟ್ಟದ ಹೋರಾಟ: ಶಿಕ್ಷಕರ ಎಚ್ಚರಿಕೆ

ಬೆಂಗಳೂರು: ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುಮಾರು 75 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹಿಂದಿನ ಸೇವಾ ಜ್ಯೇಷ್ಠತೆ ಪರಿಗಣಿಸಿ 6 ರಿಂದ 8ನೇ ತರಗತಿಗೆ ಮೇಲ್ದರ್ಜೆಗೆ ಏರಿಸಬೇಕು. ಹಾಗೂ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹೋರಾಟ ಕೈಗೊಳ್ಳಲು ಶಿಕ್ಷಕರು ತೀರ್ಮಾನಿಸಿದ್ದಾರೆ.

ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರು ಮತ್ತು ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಮಸ್ಯೆಗಳ ಕುರಿತು ಚರ್ಚಿಸಲು ಭಾನುವಾರ ಸಭೆ ನಡೆಯಿತು. ಈ ಸಭೆಯಲ್ಲಿ ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗಿದೆ.

ಸಭೆಯ ಬಳಿಕ ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌. ಷಡಾಕ್ಷರಿ, ‘ರಾಜ್ಯ ಸರ್ಕಾರ 21 ದಿನಗಳ ಒಳಗಾಗಿ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ರಾಜ್ಯದಾದ್ಯಂತ ಶಾಲಾ ಕಾಲೇಜುಗಳನ್ನು ಬಹಿಷ್ಕರಿಸಿ ಹೋರಾಟ ಹಮ್ಮಿಕೊಳ್ಳಲಾಗುವುದು. ಶಿಕ್ಷಕರನ್ನು ಪ್ರತಿನಿಧಿಸುವ ಸಂಘಟನೆಗಳ ಸುಮಾರು 5 ಸಾವಿರ ಪ್ರತಿನಿಧಿಗಳ ಸಭೆಯಲ್ಲಿ ಸರ್ವಾನುಮತದಿಂದ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ’ ಎಂದರು.

Edited By : Nagaraj Tulugeri
PublicNext

PublicNext

08/11/2021 08:29 am

Cinque Terre

32.91 K

Cinque Terre

2

ಸಂಬಂಧಿತ ಸುದ್ದಿ