ತುಮಕೂರು: ರಾಜ್ಯದ ಎರಡು ಮೂರು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.
ಧಾರವಾಡದ ಎಸ್ ಡಿ ಎಂ ಕಾಲೇಜು,ಬೆಂಗಳೂರಿನ ಒಂದು ಶಾಲೆ,ಮೈಸೂರಿನಲ್ಲಿ ಪಿಯು ಕಾಲೇಜಿನ 5 ಮಕ್ಕಳಿಗೆ ಪಾಸಿಟಿವ್ ಬಂದಿದೆ. ಉಳಿದಂತೆ ಯಾರಿಗೂ ಪಾಸಿಟಿವ್ ಬಂದಿಲ್ಲ ಎಂದು ಸಚಿವ ಬಿ.ಸಿ ನಾಗೇಶ್ ಸುದ್ದಿ ಗೋಷ್ಠಿ ನಡೆಸಿ ಮಾಹಿತಿ ನೀಡಿದರು.
ಸಿಎಂ ನೇತೃತ್ವದಲ್ಲಿ ಈ ಸಂಬಂಧ ಸಭೆ ನಡೆದಿದ್ದು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ.ಹಾಗಾಗಿ ಪೋಷಕರು ಯಾವುದೇ ರೀತಿಯ ಆತಂಕ ಪಡುವುದು ಬೇಡ.ಪ್ರತಿ ಅರ್ಧ ಗಂಟೆಗೊಮ್ಮೆ ಶಾಲೆಗಳಿಂದ ಮಾಹಿತಿ ಪಡೆದುಕೊಳ್ಳುವಂತೆ ಸೂಚಿಸಲಾಗಿದೆ.ಶಾಲಾ ಅವಧಿಯಲ್ಲಿ ಸಂಪೂರ್ಣ ಮಾಸ್ಕ್ ಧರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ತಾಂತ್ರಿಕ ಸಲಹಾ ಸಮಿತಿ ಸಲಹೆ ಮೇರೆಗೆ ಮುಂದೆ ಏನಾದರೂ ಕ್ರಮ ಕೈಗೊಳ್ಳಬೇಕಾದರೆ ತೆಗೆದುಕೊಳ್ಳುತ್ತೇವೆ.ಕೇರಳಾದಿಂದ ಬರುವವರ ಮೇಲೆ ಸಂಪೂರ್ಣ ನಿಗಾ ವಹಿಸಲಾಗಿದೆ.ಸದ್ಯಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಕೊಡುವ ಚಿಂತನೆ ನಡೆದಿಲ್ಲ.
ಮಂಗಳೂರು ಭಾಗದಲ್ಲೂ ವಿಶೇಷವಾಗಿ ನಿಗಾವಹಿಸಲಾಗಿದೆ.
ಆ ಭಾಗದಲ್ಲಿ ವಿದ್ಯಾರ್ಥಿಗಳಿಗೆ
ಯಾವುದೇ ಪಾಸಿಟಿವ್ ಬಂದಿಲ್ಲ ಎಂದು ಸ್ಪಷ್ಟನೆ ನೀಡಿದರು.
PublicNext
29/11/2021 03:12 pm