ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಕೋವಿಡ್ ಸಂಖ್ಯೆ ಕಡಿಮೆ ಆಗಿದೆ. ಶಾಲೆಗಳಲ್ಲಿ ಕೋವಿಡ್ ಬಂದವರು ಕೂಡ ತುಂಬಾ ಆರಾಮವಾಗಿ ಇದ್ದಾರೆ. ಮಕ್ಕಳ ಸಂಖ್ಯೆ ಕೂಡ ಕಡಿಮೆ ಆಗಿಲ್ಲ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಶಾಲಾ-ಕಾಲೇಜು ಬಂದ್ ಮಾಡುವುದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸ್ಪಷ್ಟಪಡಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ನಡೆದ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಸಚಿವರು, ವಿದ್ಯಾರ್ಥಿಗಳು ಹಾಸ್ಟೆಲ್ನಲ್ಲಿ ಒಟ್ಟಿಗೆ ಕುಳಿತು ಊಟ ಮಾಡಬಾರದು. ಆದಷ್ಟು ದೂರು ದೂರ ಕುಳಿತು ಊಟ ಮಾಡಬೇಕು. ಮಕ್ಕಳು ಸ್ನಾನ ಮಾಡುವಾಗ ಒಟ್ಟಿಗೆ ಹೋಗಬಾರದು. ಮಲಗುವಾಗಲೂ ಸಾಧ್ಯವಾದಷ್ಟು ದೂರವೇ ಮಲಗಲು ಸೂಚನೆ ನೀಡಿದ್ದೇವೆ. ಇಲ್ಲಿಯವರೆಗೆ 7 ರೆಸಿಡೆನ್ಸಿ ಶಾಲೆಯಲ್ಲಿ ಮಾತ್ರ ಸೋಂಕು ಪತ್ತೆ ಆಗಿದೆ. ಹಾಸ್ಟೆಲ್ ಸರಿಯಾಗಿ SOP ಪಾಲನೆ ಆಗ್ತಿದ್ಯಾ ಅಂತ ಬಿಇಓ ಮತ್ತು ಟಿಹೆಚ್ಓ ಸಮಿತಿ ನೇತೃತ್ವದಲ್ಲಿ ಮಾಡಬೇಕು. ಆದರೆ ಈ ಬಗ್ಗೆ ಯಾವುದೇ ಮಾರ್ಗಸೂಚಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
PublicNext
09/12/2021 03:32 pm