ಬೆಂಗಳೂರು: ಸ್ವಾವಲಂಬಿ ಮಹಿಳೆಯರನ್ನು ಉತ್ತೇಜಿಸುವ ಉದಾತ್ತ ಉದ್ದೇಶದಿಂದ ವಿಜಯಪುರದ ಮಹಿಳಾ ವಿಶ್ವವಿದ್ಯಾಲಯ ಪ್ರಾರಂಭವಾಗಿದೆ. ಹೀಗಾಗಿ ಇದನ್ನು ಮುಚ್ಚುವ ಪ್ರಶ್ನೆಯೇ ಇಲ್ಲ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಎಂ.ಕಾರಜೋಳ ತಿಳಿಸಿದ್ದಾರೆ.
ವಿಜಯಪುರದ ಮಹಿಳಾ ವಿಶ್ವವಿದ್ಯಾಲಯ ಮುಚ್ಚುತ್ತಾರೆ ಎಂಬ ವದಂತಿ ಬಗ್ಗೆ ಸ್ಪಷ್ಟನೆ ನೀಡಿದ ಅವರು
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪೂರಕವಾಗುವಂತೆ ಆ ಭಾಗದ ಹೆಣ್ಣುಮಕ್ಕಳು ಹೆಚ್ಚು-ಹೆಚ್ಚು ವಿದ್ಯಾವಂತರಾಗುವಂತೆ ಶೈಕ್ಷಣಿಕ ವ್ಯವಸ್ಥೆಯನ್ನು ಉನ್ನತೀಕರಿಸಲು ತನ್ಮೂಲಕ ಸುಸಂಸ್ಕೃತ, ಸುಶಿಕ್ಷಿತ ಸಮಾಜವನ್ನು ನಿರ್ಮಿಸಬೇಕು ಇದಕ್ಕಾಗಿ ಮಹಿಳಾ ವಿಶ್ವವಿದ್ಯಾಲಯ ಬೇಕು ಎಂದು ಹೇಳಿದ್ದಾರೆ.
ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಆ ಭಾಗದ ಜನಪ್ರತಿನಿಧಿಯಾಗಿ ಮತ್ತು ಜನಸಮುದಾಯದ ಆಶೋತ್ತರಗಳನ್ನು ಈಡೇರಿಸುವುದು ನನ್ನ ಕರ್ತವ್ಯವಾಗಿದೆ. ಜನರ ಅಪೇಕ್ಷೆ, ನಿರೀಕ್ಷೆಗಳಿಗೆ ತಕ್ಕಂತೆ ಕಾರ್ಯ ನಿರ್ವಹಿಸಬೇಕು. ಅದರಂತೆ ವಿಶ್ವ ವಿದ್ಯಾಲಯದ ಅಭಿವೃದ್ಧಿಗೆ ಕೊಡುಗೆ ನೀಡುವ ಅಳಿಲು ಸೇವೆಯ ಸೌಭಾಗ್ಯವು ನನ್ನದಾಗಿದೆ. ವಿಶ್ವವಿದ್ಯಾಲಯ ಕೇವಲ ಒಂದೇ ಜಿಲ್ಲೆ ಅಲ್ಲ. ಹದಿಮೂರು ಜಿಲ್ಲೆಗಳು ಈ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿವೆ ಎಂದು ಕಾರಜೋಳ ತಿಳಿಸಿದ್ದಾರೆ.
PublicNext
24/01/2022 03:29 pm