ಬೆಂಗಳೂರು: ರಾಜ್ಯದಲ್ಲಿ ಹಿಜಾಬ್-ಶಾಲು ವಿವಾದದ ನಡುವೆ ಪದವಿ ಪೂರ್ವ ಶಿಕ್ಷಣ ಮಂಡಳಿ ನಿರ್ದೇಶಕಿ ಆರ್. ಸ್ನೇಹಲ್ ಅವರನ್ನು ವರ್ಗಾವಣೆಗೊಳಿಸಲಾಗಿದೆ. ಸದ್ಯಕ್ಕೆ ಸರ್ಕಾರ ಸ್ನೇಹಲ್ ಅವರಿಗೆ ಯಾವುದೇ ಹುದ್ದೆಯನ್ನು ನೀಡಿಲ್ಲ ಎಂಬುದು ಸ್ಪಷ್ಟವಾಗಿದೆ.
ರಾಮಚಂದ್ರನ್ ಅವರನ್ನು ನೂತನ ಪಿಯು ಇಲಾಖೆ ನಿರ್ದೇಶಕ ಹುದ್ದೆಗೆ ನೇಮಿಸಲಾಗಿದೆ. ಈ ಹಿಂದೆ ರಾಮಚಂದ್ರನ್ ಅವರು ಬೀದರ್ ಜಿಲ್ಲಾಧಿಕಾರಿಯಾಗಿದ್ದರು.
ಇತ್ತೀಚೆಗೆ ಹಿಜಬ್ ಹಾಗೂ ಕೇಸರಿ ಶಾಲಿಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಸಂಘರ್ಷ ನಡೆಯುತ್ತಿದೆ. ಇದೇ ಕಾರಣಕ್ಕಾಗಿ ಸರ್ಕಾರ ನಿರ್ದೇಶಕಿಯನ್ನೇ ವರ್ಗವಣೆ ಮಾಡಿದೆ ಎನ್ನಲಾಗುತ್ತಿದೆ.
PublicNext
06/02/2022 07:27 am