ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಮ್ಮ ರಾಜ್ಯದ ಪಠ್ಯಕ್ರಮದಲ್ಲಿ ಭಗವದ್ಗೀತೆ ಅಳವಡಿಕೆ ಸದ್ಯಕ್ಕಿಲ್ಲ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ಪಠ್ಯ ಕ್ರಮದಲ್ಲಿ ಭಗವದ್ಗೀತೆ ಅಳವಡಿಕೆ ವಿಚಾರದ ಬಗ್ಗೆ ಈ ಭಾರಿ ಚರ್ಚೆ ಆಗುತ್ತಿದೆ. ಈ ಹಿನ್ನೆಲೆಯಲ್ಲಿಯೇ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ನಮ್ಮ ಪಠ್ಯಕ್ರಮದಲ್ಲಿ ಸದ್ಯಕ್ಕೆ ಈ ವರ್ಷ ಭಗವದ್ಗೀತೆ ಅಳವಡಿಕೆ ಮಾಡೋದಿಲ್ಲ. ಆದರೆ ಮಕ್ಕಳಿಗೆ ಜ್ಞಾನದ ಜೊತೆಗೆ ಸಂಸ್ಕಾರ ಕಲಿಸುವ ವಿಚಾರದ ಬಗ್ಗೆ ಚರ್ಚೆ ನಡೆಯುತ್ತಿದೆ ಅಂತಲೇ ಸಚಿವ ನಾಗೇಶ್ ಹೇಳಿದ್ದಾರೆ.

ಗುಜರಾತ್ ನಲ್ಲಿ ಈಗಾಗಲೇ 6 ರಿಂದ 12 ನೇ ತರಗತಿಯ ಪಠ್ಯಕ್ರಮದಲ್ಲಿ ಭಗವದ್ಗೀತೆ ಅಳವಡಿಸಲಾಗಿದೆ. ಆದರೆ ನಮ್ಮ ರಾಜ್ಯದಲ್ಲೂ ಸದ್ಯಕ್ಕೆ ಆ ಯೋಚನೆ ಇಲ್ಲ ಅಂತ ನಾಗೇಶ್ ತಿಳಿಸಿದ್ದಾರೆ.

Edited By :
PublicNext

PublicNext

18/03/2022 05:03 pm

Cinque Terre

56.79 K

Cinque Terre

13