ಕಾರವಾರ: ಮದರಸಾಗಳನ್ನು ಶಿಕ್ಷಣ ಪದ್ಧತಿಯಲ್ಲಿ ತರುವ ಪ್ರಯತ್ನ ಮಾಡುತ್ತೇವೆ. ಆದರೆ, ಈ ಬಗ್ಗೆ ಸದ್ಯಕ್ಕೆ ಯಾವ ಯೋಚನೆಯೂ ಇಲ್ಲ’ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಗೋಕರ್ಣದ ವಿಷ್ಣುಪೀಠ ವಿದ್ಯಾಲಯಕ್ಕೆ ಭೇಟಿ ನೀಡಿ ಮಾತನಾಡಿದ ಅವರು, 'ಅಲ್ಪಸಂಖ್ಯಾತ ಸಮುದಾಯದ ಮಕ್ಕಳು, ಮದರಸಾ ಶಿಕ್ಷಣದಿಂದಾಗಿ ಇವತ್ತಿನ ಶಿಕ್ಷಣ ಪದ್ಧತಿಯಿಂದ ದೂರ ಇರಬಾರದು. ಅವರೂ ನಮ್ಮ ಇತರ ಎಲ್ಲ ಮಕ್ಕಳಂತೆ ಈಗಿನ ಶಿಕ್ಷಣ ಪದ್ಧತಿಯಲ್ಲಿ ವಿದ್ಯಾವಂತರಾಗಿ ಸಮಾಜದಲ್ಲಿ ಮುಂದೆ ಬರಬೇಕು. ಈ ಕಾರಣದಿಂದ ಮುಂದಿನ ದಿನಗಳಲ್ಲಿ ಈ ಬಗ್ಗೆ ಯೋಚಿಸುತ್ತೇವೆ' ಎಂದು ತಿಳಿಸಿದರು.
'ಇಂದಿನ ಶಿಕ್ಷಣ ಪದ್ಧತಿಯ ಅಗತ್ಯದ ಬಗ್ಗೆ ಅಲ್ಪಸಂಖ್ಯಾತ ಸಮುದಾಯದ ನಾಯಕರ ಗಮನಕ್ಕೂ ಬಂದಿದೆ. ಮದರಸಾಕ್ಕೆ ಸೇರುವವರ ಸಂಖ್ಯೆ ಕಡಿಮೆಯಾಗಿದ್ದು, ಶಾಲೆಗಳಿಗೆ ಸೇರುವವರ ಸಂಖ್ಯೆ ಹೆಚ್ಚಾಗಿದೆ. ಇವತ್ತಿನ ಪ್ರಪಂಚದಲ್ಲಿ ಬದುಕಲು ಈ ಶಿಕ್ಷಣ ಪದ್ಧತಿ ಅಗತ್ಯ' ಎಂದು ಹೇಳಿದರು.
PublicNext
19/03/2022 05:45 pm