ಬೆಂಗಳೂರು: ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಮನೆ ಹಾಳಾಗಿ ಹೋಗ ಎಂಬುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.
ಇಂದು ಬೆಂಗಳೂರಿನ ಬನ್ನೇರುಘಟ್ಟದಲ್ಲಿ ನಡೆದಂತ ಕರ್ನಾಟಕ ಭೋವಿ ಸಂಘದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ಅವನ್ಯಾರೋ ಗಿರಾಕಿ, ಶಾಲಾ ಪಠ್ಯದಲ್ಲಿ ಸಂವಿಧಾನ ಶಿಲ್ಪಿ ಎನ್ನುವುದನ್ನೇ ಬಿಟ್ಟಿದ್ದಾರೆ. ಹಾಗಾದ್ರೇ ಸಂವಿಧಾನ ಶಿಲ್ಪಿ ಇವನಾ? ಎಂದು ಪ್ರಶ್ನಿಸುವ ಮೂಲಕ ವ್ಯಂಗ್ಯವಾಡಿದರು. ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್‌ಗೆ ಅವಮಾನ ಮಾಡಿದ್ದು ಸರಿಯಲ್ಲ. ಅವನ್ಯಾರೋ ರೋಹಿತ್ ಚಕ್ರತೀರ್ಥ ಎಂತಹ ನೀಚ ಇರಬೇಕು ನೋಡಿ. ಅವನ ಮನೆ ಹಾಳಾಗಿ ಹೋಗಾ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
PublicNext
12/06/2022 09:01 pm