ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಧಿವೇಶನ ಅಂತ್ಯ : ಸರ್ಕಾರಕ್ಕೀಗ ಸಂಪುಟ ವಿಸ್ತರಣೆಯ ತಲೆನೋವು!

ಬೆಂಗಳೂರು : ಸಾಕಷ್ಟು ವಿರೋಧ, ತೀವ್ರ ಗದ್ದಲದ ಮಧ್ಯೆ ಪ್ರಸಕ್ತ ಸಾಲಿನ ಮುಂಗಾರು ಅಧಿವೇಶನಕ್ಕೆ ತೆರೆಬಿದ್ದಿದೆ.

ಸದ್ಯ ರಾಜ್ಯ ಸರ್ಕಾರಕ್ಕೀಗ ಸಂಪುಟ ವಿಸ್ತರಣೆಯ ಮತ್ತೊಂದು ತಲೆನೋವು ಶುರುವಾಗಿದೆ.

ಅಧಿವೇಶನ ಪೂರ್ಣಗೊಳ್ಳುತ್ತಿದ್ದಂತೆಯೇ ಸಚಿವಾಕಾಂಕ್ಷಿಗಳು ಇದೀಗ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ಆರಂಭಿಸಿದ್ದಾರೆ.

ಕೆಲವರು ಸಚಿವ ಸ್ಥಾನಕ್ಕಾಗಿ ಯಡಿಯೂರಪ್ಪ ಅವರ ವಿಶ್ವಾಸಗಳಿಸಿಕೊಳ್ಳಲು ಯತ್ನ ನಡೆಸುತ್ತಿದ್ದರೆ, ಮತ್ತೆ ಕೆಲವರು ಕೇಂದ್ರೀಯ ನಾಯಕರ ಮೇಲೆ ಒತ್ತಡ ಹೇರುವ ಕಾರ್ಯಗಳನ್ನು ಮಾಡುತ್ತಿದ್ದಾರೆ.

ಇನ್ನೂ ಕೆಲವರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೊಂದಿಗೆ ಮಾತುಕತೆ ನಡೆಸಿ ಸಚಿವ ಸ್ಥಾನಕ್ಕೆ ಲಾಬಿ ನಡೆಸುತ್ತಿದ್ದಾರೆ.

ಸಂಪುಟ ವಿಸ್ತರಣೆ ಮಾಡಲು ಸರ್ಕಾರ ಈಗಾಗಲೇ ನಿರ್ಧಾರ ಕೈಗೊಂಡಿರುವ ಹಿನ್ನೆಲೆಯಲ್ಲಿ ಈಗಾಗಲೇ ಸಚಿವ ಸ್ಥಾನದಲ್ಲಿರುವ ಕೆಲ ನಾಯಕರನ್ನು ತಮ್ಮ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮನವಿ ಮಾಡಿಕೊಳ್ಳುವ ಕಾರ್ಯಗಳು ನಡೆಯುತ್ತಿವೆ ಎಂದು ಹೇಳಲಾಗುತ್ತಿದೆ.

ಈ ನಡುವೆ ಹೇಳಿಕೆ ನೀಡಿರುವ ಪ್ರವಾಸೋದ್ಯಮ ಸಚಿವ ಸಿಟಿ ರವಿಯವರು, ಬಿಜೆಪಿಯಲ್ಲಿರುವ ಒಬ್ಬ ವ್ಯಕ್ತಿಗೆ ಒಂದೇ ಹುದ್ದೆ ಎಂಬ ನಿಯಮದಂತೆ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ.

ಪಕ್ಷ ಬಯಸಿದರೆ ರಾಜೀನಾಮೆ ನೀಡುತ್ತೇನೆ. ಪಕ್ಷ ಏನು ಬಯಸುತ್ತದೆಯೋ ಅದರಂತೆ ನಡೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ಈ ನಡುವೆ 11 ಮಂದಿ ಶಾಸಕರು ಹಾಗೂ 6 ಮಂದಿ ಎಂಎಲ್ಸಿಗಳು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೊಂದಿಗೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರ ನಿವಾಸಕ್ಕೆ ಶನಿವಾರ ರಾತ್ರಿ ಭೇಟಿ ನೀಡಿದ್ದು, ಮಾತುಕತೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ.

Edited By : Nirmala Aralikatti
PublicNext

PublicNext

28/09/2020 01:15 pm

Cinque Terre

63.84 K

Cinque Terre

0

ಸಂಬಂಧಿತ ಸುದ್ದಿ