ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬುಡಕಟ್ಟು ಮಹಿಳೆಯರೊಂದಿಗೆ ಹೆಜ್ಜೆ ಹಾಕಿದ ಮಮತಾ ದೀದಿ

ಅಲಿಪುರದಾರ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಡಕಟ್ಟು ಮಹಿಳೆಯರೊಂದಿಗೆ ಹೆಜ್ಜೆ ಹಾಕಿದ್ದಾರೆ‌. ಈ ವಿಡಿಯೋ ಸದ್ಯ ವೈರಲ್ ಆಗುತ್ತಿದೆ.

ಪಶ್ಚಿಮ ಬಂಗಾಳದ ಅಲಿಪುರದಾರಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮೂರು ದಿನಗಳ ಕಾಲ ಅಲಿಪುರದಾರ ಜಿಲ್ಲಾ ಪ್ರವಾಸದಲ್ಲಿ ಇರುವ ಮಮತಾ ಇಂದು ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನವ ದಂಪತಿಗಳಿಗೆ ಶುಭ ಹಾರೈಸಿದ್ದಾರೆ. ಹಾಗೂ ಇದೇ ವೇಳೆ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಸ್ಥಳೀಯ ಬುಡಕಟ್ಟು ಮಹಿಳೆಯರೊಂದಿಗೆ ಜಾನಪದ ನೃತ್ಯ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

Edited By : Nagaraj Tulugeri
PublicNext

PublicNext

08/06/2022 10:49 pm

Cinque Terre

82.39 K

Cinque Terre

2

ಸಂಬಂಧಿತ ಸುದ್ದಿ